ಅಂತಿಮ ಮತದಾರರ ಪಟ್ಟಿ ಪ್ರಕಟ

BI ಬಿಜಾಪುರ : ಭಾರತ ಚುಣಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ಅಂತಿಮ ಮಾಡಲಾಗಿದ್ದು, ಆಯಾ ಮತಕ್ಷೇತ್ರವಾರು ಹಾಗೂ ಮತಗಟ್ಟೆವಾರು ಸಾರ್ವಜನಿಕರಿಗೆ ಮಾಹಿತಿಯನ್ನು ಮತಗಟ್ಟೆ ಅಧಿಕಾರಿಗಳ ಮೂಲಕ ಪ್ರಚೂರ ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದ್ದಾರೆ.

ಅಂತಿಮ ಮತದಾರರ ಪಟ್ಟಿ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 1813479 ಮತದಾರರಿದ್ದು, 37640 ಹೊಸ ಮತದಾರರು ಸೇರ್ಪಡೆಗೊಂಡಿದ್ದು, 27964 ಮತದಾರರು ಕಡಿತಗೊಂಡಿದ್ದಾರೆ.

ಮುದ್ದೇಬಿಹಾಳ ಮತಕ್ಷೇತ್ರದಲ್ಲಿ 211154 ಒಟ್ಟು ಮತದಾರರಾಗಿದ್ದು, ದೇವರಹಿಪ್ಪರಗಿ ಮತಕ್ಷೇತ್ರದಲ್ಲಿ 211918, ಬಸವನಬಾಗೇವಾಡಿ ಮತಕ್ಷೇತ್ರದಲ್ಲಿ 20344, ಬಬಲೇಶ್ವರ ಮತಕ್ಷೇತ್ರದಲ್ಲಿ 207823, ವಿಜಯಪುರ ನಗರ ಮತಕ್ಷೇತ್ರದಲ್ಲಿ 251441 ಮತದಾರರು, ನಾಗಠಾಣ ಮತಕ್ಷೇತ್ರದಲ್ಲಿ 259211, ಇಂಡಿ ಮತಕ್ಷೇತ್ರದಲ್ಲಿ 237871 ಹಾಗೂ ಸಿಂದಗಿ ಮತಕ್ಷೇತ್ರದಲ್ಲಿ 230620 ಮತದಾರರು ಹೊಂದಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!