ಅನಾವಶ್ಯಕವಾಗಿ ಓಡಾಡುವ ದ್ವಿಚಕ್ರ /4 ಚಕ್ರ ವಾಹನಗಳ ಸಂಚಾರ ನಿಷೇಧಿಸಿ ಆದೇಶ

BI ಬಿಜಾಪುರ : ಕೊರೋನಾ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಅನಾವಶ್ಯಕವಾಗಿ ದ್ವಿಚಕ್ರ/4 ಚಕ್ರಗಳ ವಾಹನಗಳ ಸಂಚಾರವನ್ನು ನಿಷೇಧಿಸಿ, ಈ ನಿಯಮವನ್ನು ಉಲ್ಲಂಘಿಸುವವರ ವಾಹನವನ್ನು ವಶಪಡಿಸಿಕೊಂಡು (ಸೀಜ್) ತಡೆಹಿಡಿಯುವ ಅಧಿಕಾರವನ್ನು ಲಾಕ್‌ಡೌನ್ ಅವಧಿ ಪೂರ್ಣಗೊಳ್ಳುವವರೆಗೆ ಅಥವಾ ಮುಂದಿನ ಆದೇಶದವರೆಗೆ ಇದರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಆಯಾ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರುಗಳಿಗೆ
ಅಧಿಕಾವನ್ನು ಪ್ರತ್ಯಾಯೋಜಿಸಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಆದೇಶ ಹೊರಡಿಸಿದ್ದಾರೆ.

ಈ ಆದೇಶವು ತಕ್ಷಣದಿಂದ ಜಾರಿಗೆ ಬಂದಿದ್ದು, ದ್ವಿಚಕ್ರ /4 ಚಕ್ರ ವಾಹನದ ಮೇಲೆ ದಿನಸಿ ಆಹಾರ/ಮೆಡಿಕಲ್ ಮತ್ತು ಇತರೆ ಅಗತ್ಯ ವಸ್ತುಗಳನ್ನು ಖರೀದಿಸುವಂಥವರಿಗೆ ಮತ್ತು ಅಗತ್ಯ ಸೇವೆಗಳನ್ನು ಒದಗಿಸುವ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

error: Content is protected !!