ಅಯೋಧ್ಯೆ ತೀರ್ಪು: ಜಿಲ್ಲೆಯಾದ್ಯಂತ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ


BI ಬಿಜಾಪುರ : ಸರ್ವೋಚ್ಛ ನ್ಯಾಯಾಲಯದಿಂದ ಅಯೋಧ್ಯೆ ತೀರ್ಪು ಪ್ರಕಟವಾಗುವ ಹಿನ್ನಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮತ್ತು ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಾದ್ಯಂತ ದಿನಾಂಕ : 09-11-2019 ರ ಬೆಳಿಗ್ಗೆ 6 ಗಂಟೆಯಿಂದ ದಿನಾಂಕ: 10-11-2019ರ ಬೆಳಿಗ್ಗೆ 6 ಗಂಟೆವರೆಗೆ ಸಿಆರ್‍ಪಿಸಿ ಕಲಂ 144ರನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಆದೇಶ ಹೊರಡಿಸಿದ್ದಾರೆ.

ನಿಷೇಧಾಜ್ಞೆ ಸಂದರ್ಭದಲ್ಲಿ ಅನಧಿಕೃತ ಮೆರವಣಿಗೆಗಳನ್ನು ಸೇರುವುದು ನಿಷೇಧಿಸಲಾಗಿದೆ. ತಹಶೀಲ್ದಾರರ ಅನುಮತಿ ಪಡೆದು ಮಾತ್ರ ಸಭೆ ಮತ್ತು ಸಮಾರಂಭಗಳನ್ನು ನಡೆಸುವುದು, ಕಲ್ಲುಗಳನ್ನು ಕ್ಷಾರವಧಾರ್ದ ಇಲ್ಲವೇ ಸ್ಪೋಟಕ ವಸ್ತುಗಳು ಅಥವಾ ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ತೆಗೆದುಕೊಂಡು ಹೋಗುವುದು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ. ಕಲ್ಲುಗಳನ್ನು ಮತ್ತು ಎಸೆಯುವಂತಹ ವಸ್ತುಗಳನ್ನು ಅಥವಾ ಮಾರಕಾಸ್ತ್ರಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.

ಅದರಂತೆ ಶಾಂತಿ ಭಂಗ ಉಂಟು ಮಾಡುವ ಉದ್ದೇಶದಿಂದ ಜನ ಒಂದೆಡೆ ಗುಂಪು-ಗುಂಪಾಗಿ ಸೇರುವುದನ್ನು ಹಾಗೂ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡುವುದನ್ನು ನಿಷೇಧಿಸಿ ಅವರು ಆದೇಶ ಹೊರಡಿಸಿದ್ದಾರೆ.

error: Content is protected !!