ಆಯುಷ್ಮಾನ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಡಿ ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಲು ಚುರುಕಾಗಿ ಕಾರ್ಯ ನಿರ್ವಸುವಂತೆ ಸೂಚನೆ

BI ಬಿಜಾಪುರ : ಆಯುಷ್ಮಾನ ಭಾರತ-ಆರೋಗ್ಯ ಕರ್ನಾಟಕ ಯೋಜನೆ ಅಡಿಯ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಲು ಇನ್ನೂ ಚುರುಕಾಗಿ ಕಾರ್ಯ ನಿರ್ವಸುವಂತೆ ಬೆಂಗಳೂರು ಸುವರ್ಣ ಆರೊಗ್ಯ ಸುರಕ್ಷಾ ಟ್ರಸ್ಟ್ ಕಾರ್ಯನಿರ್ವಾಹಕ ನಿರ್ದೇಶಕರಾದ ಎನ್.ಟಿ ಅಬ್ರು ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೊಜನೆ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಆಯುಷ್ಮಾನ ಭಾರತ-ಆರೋಗ್ಯ ಕರ್ನಾಟಕ ಯೋಜನೆ ಅಡಿ ನೋಂದಣಿಯಾಗಿರುವ ಅರ್ಹ ರೋಗಿಗಳಿಗೆ ಕಡ್ಡಾಯವಾಗಿ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಲು ತಿಳಿಸಿದ ಅವರು, ಕ್ಲೇಮಗಳಿಗಾಗಿ ತಕ್ಷಣ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ಗೆ ಸಲ್ಲಿಸಿದಲ್ಲಿ 10 ಗಂಟೆಯೊಳಗೆ ಚಿಕಿತ್ಸಾ ವೆಚ್ಚ ಭರಿಸಲಾಗುವುದು ಎಂದು ತಿಳಿಸಿದರು.
ಆಯುಷ್ಮಾನ ಭಾರತ-ಆರೋಗ್ತ ಕರ್ನಾಟಕ ಯೋಜನೆಯಡಿ ನಿಗದಿತ ಗುರಿಗೆ ತಕ್ಕಂತೆ ಪ್ರಗತಿ ಸಾಧಿಸದೆ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಇನ್ನು ಮುಂದೆ ಪ್ರತಿದಿನ ಕನಿಷ್ಟ 30 ಅರ್ಹ ಫಲಾನುಭವಿಗಳಿಗೆ ಜಿಲ್ಲಾ ಆಸ್ಪತ್ರೆಗಳಲ್ಲಿ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳಬೇಕು. ಅವಶ್ಯಕ ಸಂಪನ್ಮೂಲ ಎಜನ್ಸಿಗಳ ಮೂಲಕ ಸಿಬ್ಬಂದಿ ಕೊರತೆಯನ್ನು ನೀಗಿಸಿಕೊಳ್ಳುವಂತೆ ತಿಳಿಸಿದ ಅವರು ಕಾಲಕಾಲಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಪರಿಶೀಲನೆ ನಡೆಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಆಸ್ಪತ್ರೆ ಸೇರಿದಂತೆ ವಿವಿಧ ತಾಲೂಕಾ ಆಸ್ಪತ್ರೆಗಳ ವ್ಯಾಪ್ತಿಯಲ್ಲಿ ಈ ಯೋಜನೆಯಡಿ ಅರ್ಹ ಫಲಾನುಭವಿಗಳ ಚಿಕಿತ್ಸಾ ವೆಚ್ಚ ಭರಿಸುವ ಕುರಿತಂತೆ ವರದಿಗಳನ್ನು ತಕ್ಷಣ ಸಲ್ಲಿಸುವಂತೆ ತಿಳಿಸಿದ ಅವರು, ನಿರ್ಲಕ್ಷ ತೋರುವ ತಾಲೂಕಾ ಆರೋಗ್ಯ ಅಧಿಕಾರಿಗಳನ್ನು ಅಮಾನತು ನಂತಹ ಕ್ರಮ ಸಹ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಜಿಲ್ಲಾ ಆಸ್ಪತ್ರೆಗೆ ಸರ್ಕಾರದಿಂದ ಎಲ್ಲಾ ಮೂಲಭೂತ ಸೌಲಭ್ಯ ಕಲ್ಪಿದರೂ ಕೂಡಾ ಈ ಯೋಜನೆಯಡಿ ನಿಗದಿತ ಗುರಿ ಸಾಧಿಸದ ಬಗ್ಗೆ ಪರಿಶೀಲಿಸಿದ ಅವರು ಜಿಲ್ಲಾ ಆಸ್ಪತ್ರೆ ಸೇರಿದಂತೆ ತಾಲೂಕಾ ಆಸ್ಪತ್ರೆ ವ್ಯಾಪ್ತಿಯಲ್ಲಿ ಸೂಕ್ತ ಪ್ರಗತಿ ಸಾಧಿಸಬೇಕು. ಅದರಂತೆ ಶಸ್ತ್ರ ಚಿಕಿತ್ಸಾ ವಿಭಾಗ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸಲಕರಣೆ ಆಧಾರಿತ ನಿಗದಿತ ಪ್ರಗತಿ ಸಾಧಿಸುವಂತೆ ತಿಳಿಸಿ ಯಾವುದೆ ರೀತಿಯ ನಿರ್ಲಕ್ಷತೆ ಕಂಡು ಬಂದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿ ವೈ, ಎಸ್, ಪಾಟೀಲ ಅವರು ಪ್ರತಿ ಗುರುವಾರ ಆಯುಷ್ಮಾನ್ ಭಾರತ – ಆರೋಗ್ಯ ಕರ್ನಾಟಕ ಯೋಜನೆ ಅಡಿ ಸಾಧಿಸಿದ ಪ್ರಗತಿ ಪರಿಶೀಲಿಸಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಮತ್ತು ವೈಧ್ಯಾಧಿಕಾರಿಗಳು ಗುರಿಗೆ ತಕ್ಕಂತೆ ಪ್ರಗತಿ ಸಾಧಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಮಹೆಂದ್ರ ಕಾಪ್ಸೆ, ಜಿಲ್ಲಾ ಶಸ್ತ್ರ ಚಿಕಿತ್ಸಕ ಕಟ್ಟಿ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!