ಆ.11ರ ಸಾರ್ವತ್ರಿಕ ರಜೆ ರದ್ದುಪಡಿಸಿ ವಿಜಯಪುರ ಜಿಲ್ಲಾಧಿಕಾರಿ ಆದೇಶ

BI ಬಿಜಾಪುರ : ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿರುವುದರಿಂದ
ಅಧಿಕಾರಿ-ಸಿಬ್ಬಂದಿಗಳ ತುರ್ತು ಸೇವೆ ಅವಶ್ಯಕತೆ ಇರುವುದರಿಂದ ದಿನಾಂಕ : 11-08-2019 ರಂದು
ಇರುವ ರವಿವಾರ ಸಾರ್ವತ್ರಿಕ ರಜೆಯನ್ನು ರದ್ದುಪಡಿಸಿ, ಕರ್ತವ್ಯದ ದಿನವೆಂದು ಪರಿಗಣಿಸಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಆದೇಶಿಸಿದ್ದಾರೆ.

ಮಹಾರಾಷ್ಟ್ರ ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೊಯ್ನಾ
ಜಲಾಶಯದಿಂದ ಬೃಹತ್ ಪ್ರಮಾಣದಲ್ಲಿ ನೀರನ್ನು ಹರಿಬಿಡುತ್ತಿರುವುದರಿಂದ ಅದೇ ಪ್ರಮಾಣದಲ್ಲಿ ಜಿಲ್ಲೆಯ ಆಲಮಟ್ಟಿ ಜಲಾಶಯದಿಂದ ನೀರನ್ನು ಸಹ ಹೊರಬಿಡಲಾಗುತ್ತಿದೆ. ಇದಲ್ಲದೇ ನಾರಾಯಣಪುರ ಜಲಾಶಯದ ಹಿನ್ನೀರಿನಿಂದ ಎರಡು ನದಿಗಳ ಅಕ್ಕಪಕ್ಕದಲ್ಲಿರುವ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ
ಉಂಟಾಗಿರುವುದರಿಂದ, ನದಿಯ ನೀರು ಗ್ರಾಮಗಳಿಗೆ ನುಗ್ಗಿದ್ದು, ಎತ್ತರ ಪ್ರದೇಶದಲ್ಲಿರುವ ಸರ್ಕಾರಿ
ಕಟ್ಟಡಗಳನ್ನು ಗುರುತಿಸಿ ಜನರನ್ನು ಸ್ಥಳಾಂತರಿಸಿ, ಪುನರವಸತಿ ಕೇಂದ್ರಗಳನ್ನು ಸ್ಥಾಪಿಸಿ ಅಧಿಕಾರಿ-ಸಿಬ್ಬಂದಿಗಳನ್ನು ಸಹ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಆ.11ರ ಸಾರ್ವತ್ರಿಕ ರಜೆಯನ್ನು ರದ್ದುಪಡಿಸಿ ಕರ್ತವ್ಯ ದಿನವೆಂದು ಆದೇಶಿಸಲಾಗಿದ್ದು, ಸದರಿ ದಿನದಂದು ಕಂದಾಯ ಇಲಾಖೆಯ ಎಲ್ಲ ಅಧಿಕಾರಿ-ಸಿಬ್ಬಂದಿಗಳು ಎಂದಿನಂತೆ ತಪ್ಪದೇ ಕಚೇರಿ ಕೆಲಸಕ್ಕೆ ಹಾಜರಾಗಿ ಕಾರ್ಯನಿರ್ವಹಿಸಲು ಸೂಚಿಸಲಾಗಿದ್ದು, ಇದಕ್ಕೆ ತಪ್ಪಿದ್ದಲ್ಲಿ ಸಂಬಂಧಿಸಿದ ಅಧಿಕಾರಿ-ಸಿಬ್ಬಂದಿ ವಿರುದ್ದ ನಿಯಮಾನುಸಾರ ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

error: Content is protected !!