ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲವು ವಿಜಯಪುರ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

BI ಬಿಜಾಪುರ : ರಾಜ್ಯದ ಜನತೆಯಲ್ಲಿ ತೀವ್ರ ಕೂತುಹಲ ಕೆರಳಿಸಿದ್ದ ಉಪಚುನಾವಣೆಯಲ್ಲಿ ಬಿಜೆಪಿ ಗೆಲವು ಹಿನ್ನೆಲೆಯಲ್ಲಿ ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ನಗರದ ಶ್ರೀ ಸಿದ್ದೇಶ್ವರ ದೇವಾಸ್ಥಾನ ಬಳಿ ಬಿಜೆಪಿ ಜಿಲ್ಲಾಧ್ಯಕ್ಷ ಚಂದ್ರಶೇಖರ ನೇತೃತ್ವದಲ್ಲಿ ನಡೆಯಿತು ಹಾಗೂ ಸಾರ್ವಜನಿಕರಿಗೆ ಸಿಹಿ ಹಂಚಿ, ಪಟಾಕಿ ಸಿಡಿಸಿ ಬಿಜೆಪಿ ಹಾಗೂ ನರೇಂದ್ರ ಮೋದಿ ಅಮೀತ ಶಾಹ, ಬಿ.ಎಸ್.ಯಡಿಯೂರಪ್ಪನವರ ಪರ ಘೋಷಣೆ ಕೂಗುವುದರ ಮೂಲಕ ಸಂಭ್ರಮ ಆಚರಿಸಲಾಯಿತು.

ಇದೇ ಸಂದರ್ಭದಲ್ಲಿ ಚಂದ್ರಶೇಖರ ಕವಟಗಿ ಮಾತನಾಡಿ, ರಾಜ್ಯಕ್ಕಾಗಿ ಅಭಿವೃದ್ಧಿಗಾಗಿ ಮಲತಾಯಿ ಧೋರಣೆ ಮಾಡುತ್ತಿದ್ದ ಜೆಡಿಎಸ್ ಮತ್ತು ಕಾಂಗ್ರೆಸ್ ಸರ್ಕಾರಗಳಿಗೆ ಬೇಸತ್ತ ಜನರು ಬಿಜೆಪಿಯತ್ತ ಒಲವು ಮೂಡಿಸಿದ್ದಾರೆ. ಅಭಿವೃದ್ಧಿ ಹಾಗೂ ಸುಭದ್ರ ಸರ್ಕಾರಕ್ಕೆ ಸದಾಸಿದ್ಧವಾಗಿರುವು ಬಿಜೆಪಿಗೆ ಕೈ ಜೋಡಿಸಿರುವ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆಂದು ಹೇಳಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಎಸ್. ಪಾಟೀಲ ಕುಚಬಾಳ ಮಾತನಾಡಿ, ಈ ಮೂರುವರೆ ವರ್ಷ ಅಲ್ಲದೇ ಮುಂದೆ ಬರುವ ಎಲ್ಲ ದಿನಗಳಲ್ಲಿಯೂ ಬಿಜೆಪಿ ಸರ್ಕಾರ ಆಡಳಿತ ನಡೆಸಲಿದೆ. ಇದಕ್ಕೆ ಭಾರತೀಯ ಜನತಾ ಪಾರ್ಟಿ ಎಲ್ಲಾ ಸಚಿವರು ಹಾಗೂ ಕಾರ್ಯಕರ್ತರ ಸರ್ಕಾಷ್ಟ ಶ್ರಮ ವಹಿಸಿ ಕೆಲಸ ಮಾಡಿರುವುದು ಶ್ಲಾö್ಯಘನೀಯ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ವಿಜಗೌಡ ಪಾಟೀಲ ಮಾತನಾಡಿ, ಇನ್ನುಮುಂದೆ ರಾಜ್ಯದಲ್ಲಿ ಅಭಿವೃದ್ಧಿ ಪಥದಲ್ಲಿ ಬಿಜೆಪಿ ಸರ್ಕಾರ ಸಾಗಲಿದೆ. ಯಡಿಯೂರಪ್ಪನವರ ಇರುವವರೆಗೂ ಅವರ ನೇತೃತ್ವದಲ್ಲಿ ಸರ್ಕಾರ ಉಳಿಯಲಿದೆ.
ಈ ಸಂದರ್ಭದಲ್ಲಿ ನಗರ ಅಧ್ಯಕ್ಷ ಮಳನಗೌಡ ಪಾಟೀಲ, ಮಹಿಳಾ ಜಿಲ್ಲಾಧ್ಯಕ್ಷೆ ಮಲ್ಲಮ್ಮ ಜೋಗೂರ, ಜಿಲ್ಲಾ ಪಂಚಾಯತ ಸದಸ್ಯರು ಅಂಗಡಿ, ಮಹಾನಗರ ಪಾಲಿಕೆ ಮಾಜಿ ಸದಸ್ಯರು ಉಮೇಶ ವಂದಾಲ, ಬೆಲ್ಲದ, ಶಿವಾನಂದ ಭುಯ್ಯಾರ, ಭರತ ಕೋಳಿ, ಸುರೇಶ ಬಿರಾದಾರ, ಶ್ರೀಕಾಂತ ಶೀಂದೆ, ರಾಜೇಶ ತಾವಸೆ, ಕೃಷ್ಣಾ ಗುನಾಳಕರ ಮಹಿಳಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

error: Content is protected !!