ಎಲ್ಲ ಗ್ರಾಮ ಪಂಚಾಯತಗಳನ್ನು ಹಾಗೂ ಸದಸ್ಯರನ್ನು ಮುಂದಿನ ಚುನಾವಣೆ ನಡೆಸುವವರೆಗೂ ಕೂಡ ಮುಂದುವರೆಸಬೇಕು : MLC ಸುನೀಲಗೌಡ ಪಾಟೀಲ್

BI ಬಿಜಾಪುರ : ಕೊರೊನಾ ಬಿಕ್ಕಟ್ಟಿನ ಕಾರಣವಿಟ್ಟು ಗ್ರಾಮ ಪಂಚಾಯತ ಚುನಾವಣೆಗಳನ್ನು ನಡೆಸದೆ ಜಿಲ್ಲಾಧಿಕಾರಗಳ ಮೂಲಕ ಆಡಳಿತಾಧಿಕಾರಿಗಳನ್ನು ಹಾಗೂ ಗ್ರಾಮ ಪಂಚಾಯತಿಗಳಿಗೆ ಸ್ಥಳೀಯ ಸಮಿತಿಗಳನ್ನು ರಚಿಸಿ, ಬಿಜೆಪಿ ಕಾರ್ಯಕರ್ತರನ್ನು ನಾಮ ನಿರ್ದೇಶಿತ ಸದಸ್ಯರನ್ನಾಗಿ ಮಾಡಲು ಸರ್ಕಾರ ಮುಂದಾಗಿದೆ ಎಂಬುದು ತಿಳಿದು ಬಂದಿದ್ದು, ಒಂದು ವೇಳೆ ಹೀಗೆ ಮಾಡಿದರೆ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂವಿಧಾನದ ಆಶಯಗಳಿಗೆ ವಿರುದ್ಧವಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದ್ದಾರೆ.

ಈ ಕುರಿತು ಮುಖ್ಯಮಂತ್ರಿಗಳಿಗೆ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಪತ್ರ ಬರೆದಿರುವ ಅವರು “ನಮ್ಮ ರಾಜ್ಯದಲ್ಲಿ 6022ಗ್ರಾಮ ಪಂಚಾಯತಗಳಿದ್ದು, 95,168 ಸದಸ್ಯರು ಗ್ರಾಮ ಪಂಚಾಯತಗಳಲ್ಲಿ ಪ್ರತಿನಿಧಿಸುತ್ತಾರೆ. ಜೂನ್ 30, 2020ರ ಅವಧಿಯು ಪೂರ್ಣಗೊಳ್ಳುತ್ತದೆ. ಈ ಸಂದರ್ಭದಲ್ಲಿ ಯಾವುದೇ ಹೊಸ ಆಡಳಿತ ಸಮಿತಿ ರಚಿಸುವ ಹಾಗೂ ಆಡಳಿತಾಧಿಕಾರಿ ನೇಮಿಸುವ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಬಾರದು. ತಾತ್ಕಾಲಿಕ ವ್ಯವಸ್ಥೆ ಮಾಡಬೇಕೆಂದಲ್ಲಿ ಪಂಚಾಯತ್ ರಾಜ್ ಕಾಯ್ದೆ 1993ರ ಅಡಿಯಲ್ಲಿ ಗ್ರಾಮ ಪಂಚಾಯತಗಳನ್ನು 6ತಿಂಗಳು ವಿಸ್ತರಿಸಲು ಅವಕಾಶವಿದೆ. ಈ ಹಿಂದೆ 1987 ರಲ್ಲಿ ಅನುಸರಿದಂತೆ ಪ್ರಸ್ತುತ ಆಯ್ಕೆಯಾಗಿರುವ ಎಲ್ಲ ಗ್ರಾಮ ಪಂಚಾಯತಗಳನ್ನು ಹಾಗೂ ಸದಸ್ಯರನ್ನು ಮುಂದಿನ ಚುನಾವಣೆ ನಡೆಸುವವರೆಗೂ ಕೂಡ ಮುಂದುವರೆಸಬೇಕು” ಎಂದು ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ್ ತಮ್ಮ ಪತ್ರದಲ್ಲಿ ಒತ್ತಾಯಿಸಿದ್ದಾರೆ.

error: Content is protected !!