ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಗೆ ಅಭಿನಂದನೆ ಸಲ್ಲಿಸಿದರು ಗೃಹ ಸಚಿವ ಎಂ.ಬಿ.ಪಾಟೀಲ್

BI NEWS, ಬಿಜಾಪುರ : ವಿಜಯಪುರ ಜಿಲ್ಲೆಯ ವಿದ್ಯಾರ್ಥಿನಿ ಕುಮಾರಿ ಸುಪ್ರಿಯಾ.ಎಂ.ಜೋಶಿ ಎಸ್.ಎಸ್.ಎಲ್.ಸಿ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ 625 ಕ್ಕೆ 625 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿರುವ ವಿದ್ಯಾರ್ಥಿಗಳಲ್ಲಿ ಒಬ್ಬರಾಗಿರುವದು ಜಿಲ್ಲೆಗೆ ಹೆಮ್ಮೆಯ ವಿಷಯ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ವಿಜಯಪುರ ನಗರದ ಎಕ್ಸಲಂಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸುಪ್ರಿಯಾ ಜೋಶಿ ಮಾಡಿದ ಸಾಧನೆಗೆ ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿರುವ ಅವರು ಸುಪ್ರಿಯಾ ಸಾಧನೆ ಜಿಲ್ಲೆಯ ಎಲ್ಲ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ. ಈ ಮಹತ್ತರ ಸಾಧನೆಗೆ ಶ್ರಮಿಸಿದ ಪಾಲಕರು, ಶಾಲೆಯ ಶಿಕ್ಷಕರು ಹಾಗೂ ಆಡಳಿತಮಂಡಳಿಗೆ ವಿಶೇಷ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ

error: Content is protected !!