ಏಪ್ರೀಲ್ ಡಿಂದ ಕೆರೆಗಳಿಗೆ ಕಾಲುವೆಗಳ ಮೂಲಕ ನೀರು : ಶಾಸಕ ಸೋಮನಗೌಡ ಪಾಟೀಲ ಸಾಸನೂರ

BI ದೇವರ ಹಿಪ್ಪರಗಿ : ಬೇಸಿಗೆ ಸಮಯದಲ್ಲಿ ರೈತರಿಗೆ ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆಯಾಗಂತೆ ಅನುಕೂಲವಾಗಲು ಕಾಲುವೆಗಳ ಮೂಲಕ ನೀರು ಹರಿಸಲಾಗುತ್ತಿದೆ ಎಂದು ದೇವರ ಹಿಪ್ಪರಗಿ ಮತಕ್ಷೇತ್ರದ ಶಾಸಕ ಸೋಮನಗೌಡ ಪಾಟೀಲ ಸಾಸನೂರ
ಅವರು ಗುರುವಾರ ಪತ್ರಿಕಾ ಪ್ರಕಟಣೆ ಯಲ್ಲಿ ತಿಡಿಸಿದಾರೆ.

ಈಗಾಗಲೇ ಮುಳವಾಡ ಹತ್ತಿರದ ರೇಲ್ವೆ ಸೇತುವೆ ಬಳಿ ನಡೆದ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು, ಇನ್ನು ಎರಡು-ಮೂರು ದಿನಗಳಲ್ಲಿ ಮುಗಿಯಲಿದೆ. ಕಾಮಗಾರಿ ಮುಗಿದ ತಕ್ಷಣ ಏಪ್ರೀಲ್ ಒಂದರಿಂದ ಕಾಲುವೆಗಳ ಮೂಲಕ ಕೆರೆಗಳಿಗೆ ಸಾಕಷ್ಟು ನೀರು ಹರಿಸಲಾಗುವುದು. ಸಾರ್ವಜನಿಕರು ಯಾವುದೇ ರೀತಿಯ ಆತಂಕ ಬೇಡ. ಕೆರೆಗಳು ತುಂಬುವುದರಿಂದ ಅಂತರ್ಜಲಮಟ್ಟ ಹೆಚ್ಚಾಗಲಿದೆ. ಇದರಿಂದ ನಮ್ಮ ಭಾಗದಲ್ಲಿ ಎಲ್ಲ ಕೊಳವೆ ಬಾವಿಗಳಿಗೆ ನೀರು ಬರಲಿದ್ದು, ಕುಡಿಯುವ ನೀರಿನ ಯಾವುದೇ ತೊಂಗುವುದಿಲ್ಲ.

ಇನ್ನು ಮತಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆಗಾಗಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮಾತನಾಡಿದ್ದು, ಯಾವುದೇ ಕಾರಣಕ್ಕೂ ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ.

ಸ್ಥಳಿಯ ಆಡಳಿತದವರು ವಿಶೇಷ ಗಮನ ಹರಿಸಿ ಕುಡಿಯುವ ನೀರಿನ ಸಮಸ್ಯೆ ಕಡೆಗೆ ನಿಗಾ ವಹಿಸಬೇಕು. ಕೊರೊನಾ ವೈರಸ್ ಸಮಸ್ಯೆ ನೆಪ ಹೇಳಿ ಯಾವುದೇ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ತೊಂದರೆಯಾದರೆ ಸಂಬಂಧಿಸಿದ ಪಿಡಿಓಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ಇಡೀ ಬೇಸಿಗೆ ಮುಗಿಯುವವರೆಗೆ ವಿಶೇಷ ಕಾಳಜಿಯ ಮೂಲಕ ಕುಡಿಯುವ ನೀರಿನ ವ್ಯವಸ್ಥೆಗೆ ತಕ್ಷಣ ಕ್ರಮ ಕೈಕೊಳ್ಳಬೇಕು.
ಮಹಾಮಾರಿಯಾಗಿ ಕಾಡುತ್ತಿರುವ ಕೊರೊನಾ ವೈರಸ್ ಮುಕ್ತ ಮಾಡಲು ಪ್ರತಿಯೊಬ್ಬರು ಸಹಕರಿಸಬೇಕು ಇದಕ್ಕೆ ಯಾವುದೇ ಔಷಧವಿಲ್ಲ ಮನೆಯಲ್ಲಿರುವುದೊಂದೇ ಪರಿಹಾರವಾಗಿದೆ. ಅನಾವಶ್ಯಕವಾಗಿ ಹೊರಗಡೆ ಸಂಚರಿಸದೇ ಸಾಮಾಜಿಕ ಅಂತರ ಕಾಯ್ದುಕೊಂಡು ಆದಷ್ಟು ಕೊರೊನಾ ಮುಕ್ತ ಮಾಡಲು ಸಾರ್ವಜನಿಕರು ಕೈ ಜೋಡಿಸಬೇಕು. ಈ ನಿಟ್ಟಿನಲ್ಲಿ ತಾಲೂಕು ಆಡಳಿತ ಪೊಲೀಸ್ ಸಿಬ್ಬಂಧಿ ಕೆಲವೊಂದು ಕಟ್ಟು ನಿಟ್ಟಿನ ಕ್ರಮ ಕೈಕೊಳ್ಳುತ್ತಿದ್ದು, ಎಲ್ಲರೂ ಸಹಕಾರ ನೀಢಬೇಕು ಸರ್ಕಾರ ತಂದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಿಮ್ಮ ಜೊತೆ ಇಡೀ ಸರ್ಕಾರ ಇದ್ದು, ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದೆ. ಪ್ರಧಾನಿ ಮೋದೀಜಿಯವರು ಹೇಳಿದಂತೆ ಏಪ್ರೀಲ್ 14ರವರೆಗೆ ಮನೆಯಲ್ಲಿರಬೇಕು ಎಂದು ಕೋರಿದ್ದಾರೆ.

error: Content is protected !!