ಜನೇವರಿ 11 ರಂದು ಡಿಸಿಸಿ ಬ್ಯಾಂಕ್ ಇಂಡಿ ಶಾಖೆಯ ನೂತನ ಕಟ್ಟಡ ಉದ್ಘಾಟನೆ
BI ಬಿಜಾಪುರ : ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ( ಡಿಸಿಸಿ) ಬ್ಯಾಂಕ್ ನ ಇಂಡಿ ಶಾಖೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಜನೇವರಿ 11-1-2020 ರಂದು ಮುಂಜಾನೆ 11 ಗಂಟೆಗೆ ನೆರವೇರಲಿದೆ.
ಅಂದು ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀಸಿದ್ದೇಶ್ವರ ಸ್ವಾಮಿಗಳ ಸಾನಿಧ್ಯದಲ್ಲಿ ಸಮಾರಂಭ ನಡೆಯಲಿದ್ದು, ರಾಜ್ಯ ಗೃಹ ಮತ್ತು ಸಹಕಾರಿ ಸಚಿವರಾ ಬಸವರಾಜ ಬೊಮ್ಮಾಯಿ ಅವರು ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವವರು ಹಾಗೂ ಡಿಸಿಸಿ ಬ್ಯಾಂಕ್ನ ಅಧ್ಯಕ್ಷರಾದ ಶಿವಾನಂದ ಪಾಟೀಲ ಸಮಾರಮಬದ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಆಗಮಿಸಲಿದ್ದಾರೆ ಎಂದು ಡಿಸಿಸಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.