ಜನೇವರಿ 26 ರಂದು 10 ಜನ ಸರ್ಕಾರಿ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರಧಾನ

BI ಬಿಜಾಪುರ : ರಾಜ್ಯ ಸರ್ಕಾರಿ ನೌಕರರಿಗೆ ಕೊಡಮಾಡುವ ಜಿಲ್ಲಾ ಮಟ್ಟದ ಸರ್ವೊತ್ತಮ ಸೇವಾ ಪ್ರಶಸ್ತಿಯನ್ನು ದಿನಾಂಕ 26-1-2020 ರಂದು ಡಾ.ಬಿ.ಆರ್.ಅಂಬೇಡ್ಕರ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಪ್ರಧಾನ ಮಾಡಲಿದ್ದಾರೆ.
2019-20 ಸಾಲಿಗಾಗಿ ಅತ್ಯುತ್ತಮ ಸೇವೆ ಸಲ್ಲಿಸಿರುವ ರಾಜ್ಯ ಸರ್ಕಾರಿ ನೌಕರರಿಗೆ ಸರ್ವೊತ್ತಮ ಸೇವಾ ಪ್ರಶಸ್ತಿಯನ್ನು ನೀಡಲಾಗುತ್ತಿದೆ. 22-1-2020 ರಂದು ಜರುಗಿದ ಸಮಿತಿ ಸಭೆಯಲ್ಲಿ 10 ಜನರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಇಂಡಿ ತಾಲೂಕಿನ ತಡವಲಗಾ ಸಮುದಾಯ ಆರೋಗ್ಯ ಕೇಂದ್ರದ ಸ್ತ್ರೀರೋಗ ತಜ್ಞರಾದ ಡಾ.ಸುಚೇತಾ ಆಕಾಶಿ, ವಿಜಯಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಿರ್ಮಲಾ ಸುರಪೂರ, ವಿಜಯಪುರ ಜಿಲ್ಲಾ ಅಂಕಿ ಸಂಖ್ಯಾ ಸಂಗ್ರಹಣಾಧಿಕಾರಿ ಗಂಗಾಧರ ಕುಲಕರ್ಣಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸರಿನಾ ಶಿಕ್ಕಲಗಾರ, ಮಹಾನಗರ ಪಾಲಿಕೆ ಪರಿಸರ ಅಭಿಯಂತರ ಜಗದೀಶ ಎಸ್.ಆರ್, ಉಪ ಕೃಷಿ ನಿರ್ದೇಶಕರ ಕಚೇರಿಯ ಕೃಷಿ ಆಧಿಕಾರಿ ಪ್ರಥ್ವಿ ಟಿ.ಪಿ.ಎಂ, ಜಿಲ್ಲಾಧಿಕಾರಿಗಳ ಕಚೇರಿಯ ಶಿರಸ್ತೆದಾರ ಸಚ್ಚಿದಾನಂದ ತೆರದಾಳ,ನ್ಯಾಯಾಂಗ ಇಳಾಖೆಯ ಶಿರಸ್ತೇಧಾರ ಬಸವರಾಜ ಬೇವೂರ, ಹೊನಗನಹಳ್ಳಿ ಪಂಚಾಯತ ಅಭಿವೃದ್ಧಿ ಅಧಿಕಾರಿ ಎಸ್.ಆರ್.ಕಟ್ಟಿ ಹಾಗೂ ಇಂಡಿ ತಾಲೂಕಿನ ತಡವಲಗಾ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಮೇಲ್ವಚಾರಕ, ರಾಜ್ಯ ಸರಕಾರಿ ನೌಕರರ ಸಂಘದ ಕಾರ್ಯದರ್ಶಿ ರಾಜಶೇಖರ ಧೈವಾಡಿ ಇವರು ಜಿಲ್ಲಾ ಮಟ್ಟದ ಸರ್ವೊತ್ತಮ ಸೇವಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!