ದೇವರಹಿಪ್ಪರಗಿ : ಶಾಲೆ ಮಕ್ಕಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

BI ಬಿಜಾಪುರ : ದೇವರಹಿಪ್ಪರಗಿ ಪಟ್ಟಣದ ಹೊಸನಗರದಲ್ಲಿರುವ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸುನೀಲ ಜಮಾದಾರ 200 ಮೀಟರ್ ಓಟ ಪ್ರಥಮ ಸ್ಥಾನ,100 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ, ಉದ್ದಜಿಗಿತದಲ್ಲಿ ದ್ವಿತೀಯ ಸ್ಥಾನ ಗಿಟ್ಟಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಅದರಂತೆ ರಿಲೆ ಓಟದಲ್ಲಿ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಮುಖ್ಯಗುರು ಎಸ್ ಐ ರಾಂಪೂರ, ಎ ಎಚ್ ವಾಲೀಕಾರ, ಶಿವಶರಣ ಪೂಜಾರಿ, ಡಿ ಎಂ ನದಾಫ, ಸೇರಿದಂತೆ ಶಿಕ್ಷಕರು, ಎಸ್ ಡಿ ಎಂ ಸಿ ಪದಾಧಿಕಾರಿಗಳು, ಪಾಲಕರು ಅಂಬಿನಂದಿಸಿದ್ದಾರೆ.

error: Content is protected !!