ನಾಳೆ ಡಿಸಿಎಂ ಜಿಲ್ಲಾ ಪ್ರವಾಸ

BI ಬಿಜಾಪುರ : ರಾಜ್ಯದ ಉಪಮುಖ್ಯಮಂತ್ರಿ, ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಗೋವಿಂದ ಕಾರಜೋಳ ಅವರು ದಿನಾಂಕ 27-1-2020 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಬೆಳಿಗ್ಗೆ 10 ಗಂಟೆಗೆ ಬಿಜಾಪುರ ಸ್ಥಳಿಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಹಾಗೂ ಸಾರ್ವಜನಿಕರಿಂದ ಕುಂದು ಕೊರತೆಗಳ ವಿಚಾರಣೆ ಮತ್ತು ಅಹವಾಲು ಸ್ವೀಕರಿಸಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.

error: Content is protected !!