ನಿಧನ ವಾರ್ತೆ

BI NEWS, ಬಿಜಾಪುರ : ಕಾಂಗ್ರೆಸ್ ಮುಖಂಡ ನಾರಾಯಣ ಪಾಂಚಾಳ(62) ಇಂದು ಅಲ್ಪಕಾಲದ ಅನಾರೋಗ್ಯದಿಂದ ನಗರದಲ್ಲಿ ನಿಧನ ಹೊಂದಿದರು.

ಕಳೆದ 40ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಕ್ರಿಯ ಇವರು ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಕೆಪಿಸಿಸಿ ಸದಸ್ಯರಾಗಿ ಹಲವಾರು ವರ್ಷಗಳ ಕಾಲ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಕಛೇರಿ ಚಟುವಟಿಕೆಗಳನ್ನು ನೋಡಿಕೊಳ್ಳಲು ಸಕ್ರೀಯರಾಗಿದ್ದರು. ನಗರದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಛೇರಿಯ ನಿರ್ಮಾಣದಲ್ಲಿ ಇವರು ಮುಖ್ಯ ಪಾತ್ರ ವಹಿಸಿದ್ದರು.

ಕಳೆದ ಅವಧಿಯಲ್ಲಿ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಹಾಗೂ ಮಹಾನಗರ ಪಾಲಿಕೆ ಸದಸ್ಯರಾಗಿ ಸರ್ಕಾರದಿಂದ ನಾಮನಿರ್ದೇಶನ ಹೊಂದಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದು, ನಾಳೆ ಬೆ. 11ಗಂಟೆಗೆ ಜೋರಾಪುರ ಪೇಠೆಯಲ್ಲಿರುವ ಅವರ ನಿವಾಸದಿಂದ ಅಂತಿಮ ಯಾತ್ರೆ ಹೊರಟು ಸೋಲಾಪುರ ರಸ್ತೆಯಲ್ಲಿರುವ ದೇವಗಿರಿ ರುದ್ರಭೂಮಿಯಲ್ಲಿ ಅಂತ್ಯಕ್ರೀಯೆ ನೇರವೇರುವುದು.

ನಾರಾಯಣ ಪಾಂಚಾಳ ನಿಧನಕ್ಕೆ ಗೃಹ ಸಚಿವ ಎಂ.ಬಿ.ಪಾಟೀಲ್, ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರವಿಗೌಡ ಪಾಟೀಲ, ಬಿಡಿಎ ಮಾಜಿ ಅಧ್ಯಕ್ಷ, ಕೆಪಿಸಿಸಿ ಸದಸ್ಯ ಚಂದ್ರಕಾಂತ ಶೆಟ್ಟಿ, ಕಾಂಗ್ರೆಸ್ ಸೇವಾದಳ ಅಧ್ಯಕ್ಷ ಗಂಗಾಧರ ಸಂಬಣ್ಣಿ ಸೇರಿದಂತೆ ಹಲವಾರು ಪ್ರಮುಖರು ಕಂಬನಿ ಮಿಡಿದಿದ್ದಾರೆ.

error: Content is protected !!