ಪ್ರಜಾಪ್ರಭುತ್ವದಲ್ಲಿ ಜನರ ತೀರ್ಪಿಗೆ ನಾವು ವಿನಮ್ರತೆಯಿಂದ ತಲೆ ಬಾಗುತ್ತೇವೆ : ಗೃಹ ಸಚಿವ ಎಂ.ಬಿ.ಪಾಟೀಲ್

BI NEWS, ಬಿಜಾಪುರ : ಲೋಕಸಭಾ ಚುನಾವಣೆಯಲ್ಲಿ ದೇಶದ ಮತದಾರರು ಭಾರತೀಯ ಜನತಾ ಪಕ್ಷ ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಭಾರಿ ಬಹುಮತ ನೀಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನರ ತೀರ್ಪಿಗೆ ನಾವು ವಿನಮ್ರತೆಯಿಂದ ತಲೆ ಬಾಗುತ್ತೇವೆ. ಲೋಕಸಭೆಯಲ್ಲಿ ಕಾಂಗ್ರೆಸ್ ವಿರೋಧಿ ಪಕ್ಷವಾಗಿ ಪ್ರಜಾತಂತ್ರ ಆಶಯಗಳಿಗೆ ಬದ್ಧವಾಗಿ ತನ್ನ ಕಾರ್ಯ ನಿರ್ವಹಿಸಲಿದೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಲೋಕಸಭೆ ಚುನಾವಣಾ ಫಲಿತಾಂಶದ ನಂತರ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

error: Content is protected !!