ಪ್ರಯಾಣಿಕರಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಟೆಂಡರ್ ಆಹ್ವಾನ

BI ಬಿಜಾಪುರ : ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಮೂಲಭೂತ ಸೌಕರ್ಯ ಹಾಗೂ ಶುದ್ಧ ಕುಡಿಯುವ ನೀರು ಕಲ್ಪಿಸುವ ನಿಟ್ಟಿನಲ್ಲಿ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಅವಕಾಶ ದೊರಕಿಸಿಕೊಡುವ ಉದ್ದೇಶದಿಂದ ಆರ್.ಓ. ಪ್ಲಾಂಟ್ ಸ್ಥಾಪಿಸಲು ಟೆಂಡರ್ ಅಹ್ವಾನಿಸಲಾಗಿದೆ.
ಅದರಂತೆ ಸಂಸ್ಥೆಯ ವಾಹನಗಳಿಗೆ ಮುಂಗಡ ಬುಕ್ಕಿಂಗಾಗಿ ಖಾಸಗಿ ಟಿಕೇಟ್ ಪರವಾನಿಗೆ ನೀಡಲು ಸಹ ಟೆಂಡರ್ ಕರೆಯಲಾಗಿದೆ.
ಆಸಕ್ತರು ಅರ್ಜಿ ಸಲ್ಲಿಸಿ ಸದುಪಯೋಗ ಪೆಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಜಯಪುರ ವಿಭಾಗದ ವಿಭಾಗೀಯ ಕಚೇರಿ ಸಂಚಾರಿ ಶಾಖೆಯಲ್ಲಿ ಬಂದು ವಿಚಾರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!