ಬಿಜಾಪುರದಲ್ಲಿ ಸ್ಥಾಪಿಸಿರುವ ಚೆಕ್ ಪೋಸ್ಟ್ ಗೆ ಜಿಲ್ಲಾಧಿಕಾರಿ ಹಾಗೂ ಪೊಲಿಸ್ ವರಿಷ್ಠಾಧಿಕಾರಿ ಅವರು ಭೇಟಿ, ಪರಿಶೀಲನೆ

BI ಬಿಜಾಪುರ : ಕೊರೊನಾ ಎಮರ್ಜೆನ್ಸಿ ಹಿನ್ನೆಲೆಯಲ್ಲಿ ವಿಜಯಪುರದಲ್ಲಿ ಸ್ಥಾಪಿಸಿರುವ ಚೆಕ್ ಪೋಸ್ಟ್ ಗೆ ವಿಜಯಪುರ ಜಿಲ್ಲಾಧಿಕಾರಿ ವೈ‌.ಎಸ್.ಪಾಟೀಲ ಹಾಗೂ ಪೊಲಿಸ್ ವರಿಷ್ಠಾಧಿಕಾರಿ ಅನುಪಮ ಅಗ್ರವಾಲ್ ಅವರು ಭೇಟಿ ನೀಡಿ ಪರಿಶೀಲಿಸಿದರು. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಧೂಳಖೇಡ್ ಗ್ರಾಮದ ಹೊರ ಭಾಗದಲ್ಲಿನ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ಮಹಾರಾಷ್ಟ್ರದಿಂದ ವಿಜಯಪುರಕ್ಕೆ ಆಗಮಿಸುತ್ತಿದ್ದ ವರನ್ನು ವಾಪಸ್ ಕಳುಹಿಸಿದ್ದರು. ಸಗಟು ಸಾಗಾಟ ಮಾಡುವ ಲಾರಿ ಗಳಿಗೆ ಹಾಗೂ ತುರ್ತು ಸೇವೆಗಳನ್ನು ಪರಿಗಣಿಸಿ ಅವುಗಳಿಗೆ ಮಾತ್ರ ಪ್ರವೇಶ ನೀಡಬೇಕು ಎಂದು ಆದೇಶಿಸಿದರು. ಇನ್ನೂ ಚೆಕ್ ಪೋಸ್ಟ್ ನಲ್ಲಿರುವ ಸಿಬ್ಬಂದಿಗಳ ಸುರಕ್ಷತೆ ಬಗ್ಗೆ ಕಾಳಜಿ ಮೆರೆದ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ರು ಪೊಲೀಸ್ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಸುರಕ್ಷತೆಗೆ ಒತ್ತು ನೀಡಲು ಸ್ಯಾನಿಟೈಜರ್, ಮಾಸ್ಕ್ ನೀಡಿರುವ ಬಗ್ಗೆ ಪರಿಶೀಲನೆ ನಡೆಸಿದರು. ಇನ್ನೂ ರಾಷ್ಟ್ರೀಯ ಹೆದ್ದಾರಿ ೫೦ ರಲ್ಲಿನ ಗಡಿ ಭಾಗದ ಚೆಕ್ ಪೋಸ್ಟ್ ಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಅಧಿಕಾರಿಗಳ ಖಡಕ್ ಆದೇಶವನ್ನು ಡಿಸಿ ನೀಡಿದರು. ಈ ವೇಳೆ ಜಿಪಂ ಸಿಇಓ ಗೋವಿಂದ ರೆಡ್ಡಿ ಕೂಡಾ ಉಪಸ್ಥಿತರಿದ್ದರು.

error: Content is protected !!