ಬಿಜಾಪುರ ಜಿಲ್ಲಾ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಹೆಣ್ಣು ಮಗುವಿನ ದಿನ ಆಚರಣೆ

BI ಬಿಜಾಪುರ : ಪ್ರತಿಯೊಬ್ಬರು ದೇಶಿಯ ಹಣ್ಣು ಸೇವಿಸಬೇಕು ಪೌಷ್ಠಿಕಾಂಶವುಳ್ಳ ತರಕಾರಿಗಳನ್ನು ಹೆಣ್ಣು ಮಕ್ಕಳು ಹೆಚ್ಚು ಸೇವನೆ ಮಾಡಬೇಕು ಮತ್ತು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಹೇಳಿದರು.
ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಇಂದು ರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ನಿಮಿತ್ಯವಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಂದಿರಿಗೆ ಹೂ, ಸಿಹಿ ಹಣ್ಣುಗಳನ್ನು ಹಂಚಿ ಬೇಟಿ ಬಚಾವೊ ಬೇಟಿ ಪಡಾವೋ ಯೋಜನೆ ಬಗ್ಗೆ ತಿಳಿಹೇಳಿದರು. ಈ ಸಂದರ್ಭದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಿರ್ಮಲಾ ಸುರಪುರ, ನಿರೂಪಣಾಧಿಕಾರಿ ಕೆ.ಕೆ.ಚವ್ಹಾಣ, ಬಿಬಿಬಿಪಿ ಟಾಸ್ಕ್ ಫೋರ್ಸ್ ಸಮಿತಿಯ ಕಾರ್ಯದರ್ಶಿ ಎಸ್.ಆರ್. ಆಲಗೂರ, ಶಿಶು ಆಭಿವೃದ್ಧಿ ಯೋಜನಾಧಿಕಾರಿ ಅನೀಲ ಎಂ.ಉಕ್ಕಲಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

error: Content is protected !!