ಬೇಟಿ ಬಚಾವೋ ಬೇಟಿ ಪಡಾವೋ ಬೃಹತ್ ಜಾಗೃತಿ ಜಾಥಾಕ್ಕೆ ನಗರದಲ್ಲಿ ಚಾಲನೆ

BI ಬಿಜಾಪುರ : ಹೆಣ್ಣು ಮಗುವನ್ನು ರಕ್ಷಿಸಿ, ಓದಿಸಿ ( ಬೇಟಿ ಬಚಾವೋ, ಬೇಟಿ ಪಡಾವೋ) ಇಂದು ಬೃಹತ್ ಜಾಗೃತಿ ಜಾಥಾಕ್ಕೆ ಇಂದು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಬೇಟಿ ಬಚಾವೋ ಬೇಟಿ ಪಡಾವೋ ಸದಸ್ಯರು ಮತ್ತು ಜಿಲ್ಲಾ ಟಾಸ್ಕ ಪೋರ್ಸ್ ಕಮಿಟಿ ಸದಸ್ಯರಾದ ರವೀಂದ್ರ ಕಾರಬಾರೆ ಹಸಿರು ನಿಶಾನೆ ತೊರುವ ಮೂಲಕ ಚಾಲನೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಈ ಜಾಥಾಕ್ಕೆ ಸಿದ್ದೇಶ್ವರ ದೇವಸ್ಥಾನ ಹತ್ತಿರ ಚಾಲನೆ ನೀಡಿದರು.
ಸಿದ್ದೇಶ್ವರ ದೇವಸ್ಥಾನದಿಂದ ಆರಂಭಗೊಂಡ ಜಾಥಾವು ನಗರದ ಗಾಂಧಿ ವೃತ್ತ, ಬಸವೇಶ್ವರ ವೃತ್ತ ಅಂಬೇಡ್ಕರ್ ವೃತ್ತ ಮೂಲಕ ಸಾಗಿ ಅಂಬೇಡ್ಕರ್ ಕ್ರೀಡಾಂಗಣಕ್ಕೆ ಬಂದು ತಲುಪಿತು.

ಜಾಥಾವು ನಗರದ ಅಂಬೇಡ್ಕರ್ ವೃತ್ತಕ್ಕೆ ತಲುಪಿ ಹೆಣ್ಣು ಮಗುವನ್ನು ರಕ್ಷಿಸಿ ಹಾಗೂ ಹೆಣ್ಣು ಮಗುವನ್ನು ಓದಿಸುವ ಕರಿತಂತೆ ಪ್ರತಿಜ್ಞಾ ವಿಧಿಯನ್ನು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರ ನೇತೃತ್ವದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ನಿರ್ಮಲಾ ಸುರುಪುರ ಪ್ರತಿಜ್ಞಾವಿಧಿ ಭೋದಿಸಿದರು.
ಮಕ್ಕಳು, ಸಾರ್ವಜನಿಕರು ಹಾಗೂ ಅಧಿಕಾರಿಗಳು ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ ಅವರು ಮಾತನಾಡಿ ಹೆಣ್ಣು ಮಗು ರಕ್ಷಣೆ ಹಾಗೂ ಹೆಣ್ಣು ಮಗುವಿನ ಶಿಕ್ಷಣಕ್ಕೆ ಉತ್ತೇಜನ ನೀಡುವಂತೆ ಸಾರ್ವಜನಿಕರಿಗೆ ಕರೆ ನೀಡಿದರು.

ಜಾಥಾ ಅಂಗವಾಗಿ ಹೆಣ್ಣು ಭ್ರೂಣ ಹತ್ಯೆ ಅಪರಾಧ, ಪ್ರಸವ ಪೂರ್ವ ಭ್ರೂಣ ಲಿಂಗಪತ್ಯ ನಿಷೇಧ ಕಾನೂನಿನ ಅರಿವು, ಮಾತೃಶಕ್ತಿ, ರಾಷ್ಟಶಕ್ತಿ, ಸದೃಡತಾಯಿ, ಆರೋಗ್ಯವಂತ ಮಗು, ಬಾಲ್ಯವಿವಾಹ ತಡೆಗಟ್ಟುವಂತೆ ಇಂತಹ ಮಹತ್ವದ ಘೋಷಣೆಗಳೊಂದಿಗೆ ಸಾರ್ವಜನಿಕರಲ್ಲಿ ಹೆಣ್ಣು ಮಗುವಿನ ರಕ್ಷಣೆ ಮತ್ತು ಶಿಕ್ಷಣ ಕುರಿತು ಯಶಸ್ವಿಗೊಳಿಸಿದರು.

ಕಾರ್ಯಕ್ರಮ ಅಂಗವಾಗಿ ಡೊಳ್ಳು ಕಲಾ ತಂಡ ವಿವಿಧ ವಾದ್ಯ ಪ್ರಕಾರಗಳು ಒಳಗೊಂಡ ಜಾಥಾ ಜನರ ಗಮನ ಸೇಳೆಯಿತು.

ಜಾಥಾದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಸಿ.ಬಿ.ಕುಂಬಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಪ್ರಸನ್ನಕುಮಾರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಗ್ರಾಮೀಣ) ಕೆ.ಕೆ.ಚವ್ಹಾಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ರಾಜಕುಮಾರ ಯರಗಲ್, ಕ್ಷೇತ್ರ ಶೀಕ್ಷಣಾಧಿಕಾರಿ ಎಸ್.ಎಮ್.ನದಾಫ್, ದೈಹಿಕ ಶಿಕ್ಷಣಾಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆ ಅಧೀಕಾರಿ ಎಸ್.ಜಿ.ಗಂಗಶೆಟ್ಟಿ, ಬೇಟಿ ಬಚಾವೋ ಬೇಟಿ ಪಡಾವೋ ಸಾರ್ವಜನಿಕ ಶಿಕ್ಷಣ ಇಲಾಖೆ ನೂಡಲ್ ಅಧಿಕಾರಿ ನಿರ್ಮಲಾ ದೊಡಮನಿ ಸೇರಿದಂತೆವಿವಿಧ ಶಾಲೆಯ ಮಕ್ಕಳು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಾಹಯಕಿಯರು, ವಿವಿಧಇಲಾಖೆ ಅಧಿಕಾರಿಗಳು ಜಾಗೃತಿ ಜಾಥಾದಲ್ಲಿ ಭಾಗವಹಿಸಿದ್ದರು.

error: Content is protected !!