ಭಾನುವಾರ ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಿಗೆ ರಜೆ

BI ಬಿಜಾಪುರ : ದೇಶಾದ್ಯಂತ 22-03-2020ರ ಭಾನುವಾರ ಎಲ್ಲಾ ಸಾರ್ವಜನಿಕರು ಕರೊನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಜನತಾ ಕರ್ಫ್ಯೂವನ್ನು ಸಾರ್ವಜನಿಕರು ಸ್ವಇಚ್ಛೆಯಿಂದ ವಿಧಿಸಿಕೊಂಡು ಅಂದು ಬೆಳಿಗ್ಗೆ 7.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಮನೆಯಲ್ಲೇ ಇರುವುದರಿಂದ ಅಂದು ನ್ಯಾಯಬೆಲೆ ಅಂಗಡಿಗಳಲ್ಲೂ ಪಡಿತರ ಚೀಟಿದಾರರು ಪಡಿತರ ಪಡೆಯಲು ಆಗಮಿಸುವ ಸಾಧ್ಯತೆ ಕಡಿಮೆ ಇರುತ್ತದೆ. ಆದ್ದರಿಂದ ದಿನಾಂಕ 22-03-2020ರ ಭಾನುವಾರ ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಿಗೆ ರಜೆ ನೀಡಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

ಈ ದಿನದ ವಿತರಣೆಯನ್ನು ದಿನಾಂಕ 24-03-2020ರ ಮಂಗಳವಾರ ನಿರ್ವಹಿಸುವಂತೆ ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿ ವರ್ತಕರಿಗೆ ಸೂಚಿಸಲು ತಿಳಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!