ಭಾರತೀಯ ಜನತಾ ಪಾರ್ಟಿ ಅಧ್ಯಕ್ಷ ಆಯ್ಕೆ

BI ಬಿಜಾಪುರ : ನಗರದ ಗುರುದತ್ತ ಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಸಭೆಯಲ್ಲಿ ರಾಜ್ಯ ಪಕ್ಷದ ಚುನಾವಣೆ ಸಹ ಉಸ್ತುವಾರಿ ಹಾಗೂ ಶಾಸಕರಾದ ಹಾಲಪ್ಪ ಆಚಾರ್ಯರು ವಿಜಯಪುರ ಜಿಲ್ಲೆ ಭಾರತಿಯ ಜನತಾ ಪಾರ್ಟಿಯ ನೂತನ ಜಿಲ್ಲಾಧ್ಯಕ್ಷರನ್ನಾಗಿ ಆರ್.ಎಸ್. ಪಾಟೀಲ ಕುಚಬಾಳ ಅವರನ್ನು ಆಯ್ಕೆ ಮಾಡಿ ಘೋಷಣೆ ಮಾಡಿದರು. ಈ ಸಭೆಯಲ್ಲಿ ಜಿಲ್ಲಾ ಸಂಸದರಾದ ರಮೇಶ ಜಿಗಜಿಣಗಿ, ಶಾಸಕರಾದ ಸೋಮನಗೌಡ ಪಾಟೀಲ ಸಾಸನೂರ, ಪಕ್ಷದ ಜಿಲ್ಲಾ ಚುನಾವಣೆ ಉಸ್ತುವಾರಿಗಳಾದ ಅಮರನಾಥ ಪಾಟೀಲ, ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಮಾಜಿ ಸಚಿವರಾದ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಜಿಲ್ಲಾ ಮಾಜಿ ಸಚಿವರಾದ ಎಸ್.ಕೆ. ಬೆಳ್ಳುಬ್ಬಿ, ಡಾ. ಗೋಪಾಲ ಕಾರಜೋಳ, ದಯಾಸಾಗರ ಪಾಟೀಲ, ಚುನಾವಣೆ ಸಹ ಉಸ್ತುವಾರಿಗಳಾದ ಸಿದ್ಧಲಿಂಗ ಹಂಜಗಿ, ಬೆಳಗಾಂವ ವಿಭಾಗದ ಸಂಘಟನಾ ಕಾರ್ಯದರ್ಶಿಗಳಾದ ಪ್ರಕಾಶ ಅಕ್ಕಲಕೊಟ, ವಿಜುಗೌಡ ಪಾಟೀಲ, ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಕವಟಗಿ, ರವಿಕಾಂತ ಬಗಲಿ, ಸಂಗರಾಜ ದೇಸಾಯಿ, ವಿವೇಕಾನಂದ ಡಬ್ಬಿ ಇದೇ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ 9 ಮಂಡಲದ ಅಧ್ಯಕ್ಷರುಗಳು ಉಪಸ್ಥಿತರಿದ್ದರು.

error: Content is protected !!