ರಸ್ತೆ ವಾಹನ ಸಂಚಾರ ಗಣತಿ ಫೆ.19 ರಿಂದ ಪ್ರಾರಂಭ

BI ಬಿಜಾಪುರ : ಕರ್ನಾಟಕ ರಾಜ್ಯ ಲೋಕೋಪಯೋಗಿ ಇಲಾಖೆ ವತಿಯಿಂದ ರಸ್ತೆ ವಾಹನ ಸಂಚಾರ ಗಣತಿ ಕಾರ್ಯವನ್ನು ಪ್ರಾರಂಭಿಸಲಾಗುತ್ತಿದ್ದು,ಈ ಗಣತಿ ಕಾರ್ಯವು ಫೆ 19ರ ಬೆಳಿಗ್ಗೆ 6 ಗಂಟೆಯಿಂದ ಫೆ.26 ರ ಬೆಳಿಗ್ಗೆ 6 ಗಂಟೆಯವರೆಗೆ ಒಟ್ಟು ಏಳು ದಿನಗಳ ಕಾಲ ಸತತವಾಗಿ ನಡೆಯಲಿದೆ.

ಲೋಕೋಪಯೋಗಿ ಇಲಾಖೆಯ ಎಲ್ಲ ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ವಾಹನ ಸಂಚಾರ ಗಣತಿ ಕಾರ್ಯವನ್ನು ಕೈಗೊಳ್ಳಲಾಗುತ್ತಿದ್ದು, ಇದಕ್ಕಾಗಿ ರಸ್ತೆಗಳ ಬದಿಯಲ್ಲಿ ತಾತ್ಕಾಲಿಕ ಗಣತಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದ್ದೆ.
ಗಣತಿ ಕೇಂದ್ರಗಳಲ್ಲಿ ವಾಹನಗಳ ರಸ್ತೆ ಸಂಚಾರ ಗಣತಿ ಕೇಂದ್ರವಿದೆ. ‘’ನಿಮ್ಮ ವಾಹನಗಳನ್ನು ನಿಧಾನವಾಗಿ ಚಲಿಸಿ’’ ಎಂದು ಸೂಚನಾ ಫಲಕಗಳನ್ನು ತೂಗಿ ಬಿಟ್ಟಿರುತ್ತಾರೆ. ಎಲ್ಲಾ ವಾಹನ ಚಾಲಕರು ಹಾಗೂ ಸಾರ್ವಜನಿಕರು ವಾಹನ ಗಣತಿ ಕೇಂದ್ರಗಳ ಮುಂದೆ ತಮ್ಮ ವಾಹನಗಳನ್ನು ನಿಧಾನವಾಗಿ ಸಾಗಿಸಿಕೊಂಡು ಮುಂದೆ ಸಾಗುವ ಮೂಲಕ ವಾಹನ ಗಣತಿ ಕಾರ್ಯದಲ್ಲಿ ಸಹಕರಿಸಬೇಕು ಎಂದು ಲೋಕೋಪಯೋಗಿ ಇಲಾಖೆಯ ಬೆಳಗಾವಿ ವೃತ್ತತದ ಅಧೀಕ್ಷಕ ಇಂಜಿನಿಯರ್ ಬಿ.ವೈ ಪವಾರ ಪ್ರಕಟಣೆಯಲ್ಲಿ ಕೋರಿದ್ದಾರೆ.

error: Content is protected !!