ವಿಜಯಪುರ ಜಿಲ್ಲೆಯ ಸೈಕ್ಲಿಂಗ್ ವೆಲೋಡ್ರೋಮ್ ಕಾಮಗಾರಿ ಪರಿಶೀಲನೆ

BI NEWS, ಬಿಜಾಪುರ : ವಿಜಯಪುರ ನಗರದ ಹೊರವಲಯದ ಭೂತನಾಳ ಕೆರೆ ಬಳಿ ನಿರ್ಮಾಣಗೊಳ್ಳುತ್ತಿರುವ ಅಂತರಾಷ್ಟ್ರೀಯ ಮಟ್ಟದ ಸೈಕ್ಲಿಂಗ್ ವೆಲೋಡ್ರೋಮ್ ಕಾಮಗಾರಿ ಸ್ಥಗಿತಗೊಂಡಿರುವ ಹಿನ್ನೆಲೆ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಆಯುಕ್ತ ಶ್ರೀನಿವಾಸ ಅವರು ಕಾಮಗಾರಿ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಕ್ರೀಡಾ ಇಲಾಖೆಯ ಆಯುಕ್ತರು ಅಂತರಾಷ್ಟ್ರೀಯ ಮಟ್ಟದ ಸುಸಜ್ಜಿದ ಸೈಕ್ಲಿಂಗ್ ವೆಲೋಡ್ರೋಮ್ ಕಾಮಗಾರಿ ನಿರ್ಮಾನ ಕಾರ್ಯ ಪ್ರಗತಿಯಲ್ಲಿದ್ದು,ಈವರೆಗೆ 4 ಕೊಟಿ ರೂ.ವೆಚ್ಚ ಮಾಡಲಾಗಿದೆ.ಉಳಿದ ಅನುದಾನ ಮಂಜುರಾತಿಗೆ ಸಂಬಂಧಪಟ್ಟಂತೆ ಅವಶ್ಯಕ ಕ್ರಮ ಕೈಗೊಳ್ಳಲಾಗುವುದು ಎಂದರು. ಅದರಂತೆ ವೆಲೋಡ್ರೋಮ್ ವ್ಯಾಪ್ತಿಯಲ್ಲಿ ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆಗೆ ಸಂಬಂಧಪಟ್ಟಂತೆ ಖರ್ಚು ವೆಚ್ಚದ ಪ್ರಸ್ತಾವನೆ ಸಲ್ಲಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾ ಕ್ರೀಡಾಂಗಣ ವ್ಯಾಪ್ತಿಯಲ್ಲಿ 50 ಲಕ್ಷ ರೂ.ವೆಚ್ಚದ ಸಿಂಥೆಟಿಕ್ ಟ್ರ್ಯಾಕ್, ವಾಲಿಬಾಲ್ ಮೈದಾನ ಮತ್ತು 2 ಕೋಟಿ ರೂ. ವೆಚ್ಚದಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜಂಟಿ ನಿರ್ದೇಶಕ ರಮೇಶ,ಹೆಚ್ಚುವರಿ ಡಿಸಿ ಎಚ್ ಪ್ರಸನ್ನ,ಮಹಾನಗರ ಪಾಲಿಕೆ ಆಯುಕ್ತ ಡಾ.ಔದ್ರಾಮ,ಸೈಕ್ಲಿಂಗ್ ಅಸೋಶಿಯೇಷನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಎಸ್ ಕುರಣಿ,ಜಿಲ್ಲಾಧ್ಯಕ್ಷ ರಾಜು ಪಾಟೀಲ,ಜಿಲ್ಲಾ ಬಾಸ್ಕೆಟ್ ಬಾಲ್ ಸಂಸ್ಥೆ ಅಧ್ಯಕ್ಷ ಆರ್ ಎಸ್ ಬಿದರಿ,ಸೈಕ್ಲಿಂಗ್ ತರಬೇತಿದಾರೆ ಅಕ್ಕಾ ಫಡತಾರೆ,ರಾಷ್ಟ್ರ ಪ್ರಶಸ್ತಿ ವಿಜೇತ ಜಾವೀದ ಜಮಾದಾರ ಹಾಗೂ ಇನಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!