ಸರ್ಕಾರಿ, ಅರೆ ಸರ್ಕಾರಿ ಹಾಗೂ ಸರ್ಕಾರದ ಸ್ವಾಮಿತ್ವದ ಕಾರ್ಯಾಲಯಗಳಿಗೆ ತುರ್ತುಸಂದರ್ಭ ಹೊರತುಪಡಿಸಿ ನಿರ್ಬಂಧ

BI ಬಿಜಾಪುರ : ಜಿಲ್ಲೆಯಲ್ಲಿ ಕೋವಿಡ್ -19 ವೈರಸ್ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ವಿಜಯಪುರ ಜಿಲ್ಲೆಯ ಎಲ್ಲ ಸರಕಾರಿ, ಅರೆ ಸರ್ಕಾರಿ ಹಾಗೂ ಸರ್ಕಾರದ ಸ್ವಾಮಿತ್ವಕ್ಕೆ ಒಳಪಟ್ಟ ಎಲ್ಲ ಕಾರ್ಯಾಲಯಗಳಿಗೆ ತುರ್ತು ಅಲ್ಲದ ಕೆಲಸಗಳಿಗೆ ಆಗಮಿಸುವ ಸಾರ್ವಜನಿಕರ ಪ್ರವೇಶವನ್ನು ತಕ್ಷಣದಿಂದ ಮುಂದಿನ ಆದೇಶದವರೆಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಆದೇಶ ಹೊರಡಿಸಿದ್ದಾರೆ.

ತುರ್ತು ಅಲ್ಲದ ಕೆಲಸಗಳಿಗೆ ಸಂಬಂಧಿಸಿದ ಕಚೇರಿಯ ಮುಖ್ಯಸ್ಥರು ನಿರ್ಧರಿಸುವುದು ಹಾಗೂ ಹೀಗೆ ನಿರ್ಧರಿಸುವಾಗ ಕೆಲಸದ ಮಹತ್ವ ಹಾಗೂ ಪಾವಿತ್ರ್ಯತೆಯನ್ನು ಗಮನದಲ್ಲಿಟ್ಟುಕೊಳ್ಳಬೇಕು. ಈ ಬಗ್ಗೆ ಎಲ್ಲಾ ಕಚೇರಿಯ ಮುಖ್ಯಸ್ಥರು ತಮ್ಮ ಕಚೇರಿಯ ಮುಖ್ಯ ಪ್ರವೇಶ ದ್ವಾರಕ್ಕೆ ಸೂಕ್ತ ಸೂಚನಾ ಫಲಕ ಅಳವಡಿಸಬೇಕು ಎಂದು ಅವರು ಆದೇಶಿಸಿದ್ದಾರೆ.

error: Content is protected !!