ಸಿದ್ದರಾಮಯ್ಯ ನೇತೃತ್ವದಲ್ಲಿ ನೌಶೀನ್ ಕುಟುಂಬಕ್ಕೆ 5 ಲಕ್ಷ ರೂ, ಜಿಲ್ಲಾ ಕಾಂಗ್ರೆಸ್‌ನಿಂದ 2.5 ಲಕ್ಷ ರೂ. ಚೆಕ್ ವಿತರಣೆ

BI ಮಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ನಗರದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಗುರುವಾರ ನಡೆದ ಹಿಂಸಾಚಾರದ ಸಂದರ್ಭ ಗೋಲಿಬಾರ್‌ಗೆ ಬಲಿಯಾದ ಕುದ್ರೋಳಿಯ ಯುವಕ ನೌಶೀನ್ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಗೃಹ ಸಚಿವರಾದ ಎಂ.ಬಿ.ಪಾಟೀಲ್, ಝಮೀರ್ ಅಹ್ಮದ್ ಸೋಮವಾರ ಮಧ್ಯಾಹ್ನ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿ ಐದು ಲಕ್ಷ ರೂ.ನ ಚೆಕ್ ವಿತರಿಸಿದರು. ಅಲ್ಲದೇ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದಲೂ 2.5 ಲಕ್ಷ ರೂ.ನ ಚೆಕ್ ಅನ್ನು ಸಂತ್ರಸ್ತ ಕುಟುಂಬಕ್ಕೆ ನೀಡಲಾಯಿತು.

ಈ ಸಂದರ್ಭದಲ್ಲಿ ಸಚಿವರು, ಶಾಸಕರು ಹಾಗೂ ಮತ್ತಿತರ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

error: Content is protected !!