ಹೇರ್ ಕಟಿಂಗ್ ಸಲೂನ್, ಬ್ಯೂಟಿ ಪಾರ್ಲರ್‌ಗಳೂ ಸ್ಥಗಿತ

BI ಬಿಜಾಪುರ : ಕೋವಿಡ್ – 19 ವೈರಾಣುಗಳಿಂದ ಹರಡುವ ಅಪಾಯಕಾರಿ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲೆಯ ವ್ಯಾಪ್ತಿಯ ಸಾರ್ವಜನಿಕರ ಅತೀ ನಿಕಟ ಸಂಪರ್ಕದಲ್ಲಿರುವ ಎಲ್ಲ ಹೇರ್ ಕಟಿಂಗ್ ಸಲೂನ್ ಮತ್ತು ಬ್ಯೂಟಿ ಪಾರ್ಲರ್, ಆರೋಗ್ಯ ಇಲಾಖೆಯ ಆಯುಷ್ಮಾನ್ ಕಾರ್ಡ್ ಸೇವೆಗಳನ್ನು ಸ್ಥಗಿತಗೊಳಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಆದೇಶಿಸಿದ್ದಾರೆ.

ಈ ಆದೇಶವನ್ನು ಕಡ್ಡಾಯವಾಗಿ ಜಾರಿಗೊಳಿಸಲು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕರು, ಜಿಲ್ಲೆಯ ಎಲ್ಲ ಉಪ ವಿಭಾಗಾಧಿಕಾರಿಗಳು ಮತ್ತು ತಹಶೀಲದಾರರು, ಮಹಾನಗರ ಪಾಲಿಕೆ ಆಯುಕ್ತರು, ಜಿಲ್ಲೆಯ ಎಲ್ಲಾ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಶೀಲದಾರರು, ಎಲ್ಲ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಜವಾಬ್ದಾರರಾಗಿರುತ್ತಾರೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

error: Content is protected !!