ಹೊಸ ತಾಲೂಕುಗಳ ತಹಶೀಲ್ದಾರರಿಗೆ ಜಿಲ್ಲಾಧಿಕಾರಿಗಳಿಂದ ವಾಹನಗಳು ಹಸ್ತಾಂತರ

BI ಬಿಜಾಪುರ : ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಇಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಜಿಲ್ಲೆಯಲ್ಲಿ ಹೊಸದಾಗಿ ರಚನೆಯಾದ ತಾಲೂಕಗಳ ತಹಶಿಲ್ದಾರರುಗಳಿಗೆ ವಾಹನಗಳನ್ನು ಹಸ್ತಾಂತರಿಸಿ ವಾಹನಗಳಿಗೆ ಹಸಿರು ನಿಶಾನೆ ತೋರುವ ಮುಖಾಂತರ ಚಾಲನೆ ನೀಡಿದರು.

ಚಡಚಣ, ನಿಡಗುಂದಿ, ಕೋಲಾರ, ತಿಕೋಟಾ, ಬಬಲೇಶ್ವರ, ತಾಳಿಕೋಟೆ, ದೇ ಹಿಪ್ಪರಗಿ ಈ ಒಟ್ಟು 7 ತಾಲೂಕಗಳ ತಶಿಲ್ದಾರ ಅವರಿಗೆ ವಾಹನಗಳನ್ನು ವಿತರಣೆ ಮಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹನಾಧಿಕಾರಿ ಗೋವಿಂದ ರೆಡ್ಡಿ, ಅಪರ್ ಜಿಲ್ಲಾಧಿಕಾರಿ ಪ್ರಸನ್ನಕುಮಾರ್ ಎಚ್, ಜಿಲ್ಲೆಯ ಎಲ್ಲ ತಾಲೂಕುಗಳ ತಹಶೀಲ್ದಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದರು.

error: Content is protected !!