ಕೊರಂಟೈನಲ್ಲಿರುವ ಮಕ್ಕಳಿಗೆ ಹಾಲು, ಬಿಸ್ಕತ್ತ ವಿತರಣೆ

BI ಕಲಕೇರಿ : ಕಲಕೇರಿಯಿಂದ ರಾಜ್ಯದ ವಿವಿದೆಡೆ ಸೇರಿದಂತೆ ನೆರೆಯ ಮಹಾರಾಷ್ಟ್ರ, ಗೋವಾ ಹಾಗೂ ಆಂಧ್ರ ಸೇರಿದಂತೆ ಬೇರೆ ಬೇರೆ ರಾಜ್ಯಗಳಿಗೆ ದುಡಿಯಲು ಹೊದಂತಹ ಕಾರ್ಮಿಕರು ಕರೋನಾ ಮಹಾಮಾರಿಯಿಂದ ಅನೇಕ ಸಂಕಷ್ಟಗಳನ್ನು ಎದುರಿಸಿ ತಮ್ಮ ಸ್ವಗ್ರಾಮಕ್ಕೆ ಬರಲು ಹರಸಾಹಸ ಪಟ್ಟು ಆಗಮಿಸಿ ಕಲಕೇರಿಯ ವಿವಿಧ ಶಾಲೆಗಳಲ್ಲಿ ಕೊರಂಟೈನಗೊಳಗಾದ ಸುಮಾರು 257 ಕುಟುಂಬಗಳಲ್ಲಿ ಇರುವ ಪುಟ್ಟ ಮಕ್ಕಳಿಗೆ ಹಾಲು, ಬಿಸ್ಕತ್ ಸೇರಿದಂತೆ ದಿನಸಿಯನ್ನು ಮುದ್ದೇಬಿಹಾಳ ಶಾಸಕರಾದ ಎ.ಎಸ್. ಪಾಟೀಲ (ನಡಹಳ್ಳಿ) ವಿತರಿಸಿದರು. ನನ್ನ ಮಕ್ಕಳು ತಮ್ಮ ಖರ್ಚಿನಿಂದ ಇಲ್ಲಿಯವರೆಗೆ […]

Continue Reading

ಮುದ್ದೇಬಿಹಾಳ ಹಾಗೂ ದೇವರಹಿಪ್ಪರಗಿ ಎರಡ ಮತಕ್ಷೇತ್ರಗಳು ನನಗೆ ಕಣ್ಣುಗಳಿದ್ದಂತೆ : ಶಾಸಕ ಎ ಎಸ್ ಪಾಟೀಲ ನಡಹಳ್ಳಿ

BI ದೇವರಹಿಪ್ಪರಗಿ: ಮುದ್ದೇಬಿಹಾಳ ಹಾಗೂ ದೇವರಹಿಪ್ಪರಗಿ ಎರಡ ಮತಕ್ಷೇತ್ರಗಳು ನನಗೆ ಕಣ್ಣುಗಳಿದ್ದಂತೆ ಅದಕ್ಕಾಗಿ ಸಂಕಷ್ಟದಲ್ಲಿರುವವರೆಗೆ ಸಹಾಯ ಮಾಡುತ್ತಿರುವೆ ಎಂದು ಮುದ್ದೇಬಿಹಾಳ ಶಾಸಕ ಎ ಎಸ್ ಪಾಟೀಲ ನಡಹಳ್ಳಿ ಹೇಳಿದರು. ಬುಧವಾರ ದೇವರಹಿಪ್ಪರಗಿ ಮತಕ್ಷೇತ್ರದ ಪಡಗಾನೂರ, ಇಂಗಳಗಿ, ಮುಳಸಾವಳಗಿ, ಕಡ್ಲೇವಾಡ, ಚಿಕ್ಕರೂಗಿ ಹಿಟ್ಟಿನಹಳ್ಳಿ ದೇವೂರ, ಮಣೂರ, ಜಾಲವಾದ ಗ್ರಾಮಗಳಲ್ಲಿ ವಲಸೆ ಬಂದು ಕೊರಂಟೈನದಲ್ಲಿರುವ ಜನರಿಗೆ ಹಾಲಿನ ಪಾಕಿಟು, ಬಿಸ್ಕಿಟು ದಿನಬಳಕೆ ವಸ್ತುಗಳನ್ನು ನೀಡಿ ಮಾತನಾಡಿದ ಅವರು, ಸಂಕಷ್ಟದಲ್ಲಿರುವವರನ್ನು ಸಹಾಯ ಹಸ್ತ ನೀಡುವುದು ನನ್ನ ಪ್ರಥಮ ಆದ್ಯತೆಯಾಗಿದ್ದು, ಸುಮಾರು 15 […]

Continue Reading

ಇಡೀ ಕ್ಷೇತ್ರ ನೀರಾವರಿ ಮಾಡುವವರೆಗೂ ವಿರಮಿಸುವುದಿಲ್ಲ : ಶಾಸಕ ಸೋಮನಗೌಡ ಪಾಟೀಲ ಸಾಸನೂರ

BI : ಇಡೀ ಕ್ಷೇತ್ರದಲ್ಲಿ ನೀರಾವರಿ ಮಾಡುವವರೆಗೂ ವಿರಮಿಸುವುದಿಲ್ಲ, ಪ್ರತಿಯೊಂದು ಗ್ರಾಮಗಳು ಕುಡಿಯುವ ನೀರಿನ ಬವಣೆ ಮುಕ್ತವಾಗಬೇಕು ಈ ನಿಟ್ಟಿನಲ್ಲಿ ಕ್ಷೇತ್ರದ ಪ್ರತಿಯೊಂದು ಕೆರೆಗಳನ್ನು ತುಂಬಿಸಲಾಗಿದೆ ಎಂದು ದೇವರಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ ತಿಳಿಸಿದರು. ಮಂಗಳವಾರ ಪಟ್ಟಣದ ಹೊರವಲಯದಲ್ಲಿ ತುಂಬಿ ನಿಂತಿರುವ ಕೆರೆಗೆ ಗಂಗಾ ಪೂಜೆ ನೆರವೇರಿಸಿ ಮಾತನಾಡಿದ ಅವರು, ನಮ್ಮ ಮತಕ್ಷೇತ್ರ ಬಹುದಿನಗಳಿಂದ ಕುಡಿಯುವ ನೀರಿನ ಬವಣೆ ಅನುಭವಿಸುತ್ತಿತ್ತು. ಈಗ ಕಾಲುವೆಗಳ ಮೂಲಕ ಬಹುತೇಕ ಕೆರೆಗಳನ್ನು ತುಂಬಿಸಲಾಗಿದೆ. ನಮ್ಮ ಕ್ಷೇತ್ರದಲ್ಲಿ ಕಾಲುವೆಗಳ ಮೂಲಕ ಕೆರೆ […]

Continue Reading

ಎಲ್ಲ ಗ್ರಾಮ ಪಂಚಾಯತಗಳನ್ನು ಹಾಗೂ ಸದಸ್ಯರನ್ನು ಮುಂದಿನ ಚುನಾವಣೆ ನಡೆಸುವವರೆಗೂ ಕೂಡ ಮುಂದುವರೆಸಬೇಕು : MLC ಸುನೀಲಗೌಡ ಪಾಟೀಲ್

BI ಬಿಜಾಪುರ : ಕೊರೊನಾ ಬಿಕ್ಕಟ್ಟಿನ ಕಾರಣವಿಟ್ಟು ಗ್ರಾಮ ಪಂಚಾಯತ ಚುನಾವಣೆಗಳನ್ನು ನಡೆಸದೆ ಜಿಲ್ಲಾಧಿಕಾರಗಳ ಮೂಲಕ ಆಡಳಿತಾಧಿಕಾರಿಗಳನ್ನು ಹಾಗೂ ಗ್ರಾಮ ಪಂಚಾಯತಿಗಳಿಗೆ ಸ್ಥಳೀಯ ಸಮಿತಿಗಳನ್ನು ರಚಿಸಿ, ಬಿಜೆಪಿ ಕಾರ್ಯಕರ್ತರನ್ನು ನಾಮ ನಿರ್ದೇಶಿತ ಸದಸ್ಯರನ್ನಾಗಿ ಮಾಡಲು ಸರ್ಕಾರ ಮುಂದಾಗಿದೆ ಎಂಬುದು ತಿಳಿದು ಬಂದಿದ್ದು, ಒಂದು ವೇಳೆ ಹೀಗೆ ಮಾಡಿದರೆ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂವಿಧಾನದ ಆಶಯಗಳಿಗೆ ವಿರುದ್ಧವಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳಿಗೆ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಪತ್ರ ಬರೆದಿರುವ […]

Continue Reading

ಲಾಕಡೌನ್ ಸಡಿಲಿಕೆ, ನಿರ್ಲಕ್ಷ್ಯ ಬೇಡ : ಶಾಸಕ ಸೋಮನಗೌಡ ಪಾಟೀಲ ಸಾಸನೂರ

BI : ಲಾಕಡೌನ್ ಸಡಿಲಿಕೆಯಾಗಿದೆ ಎಂದು ಯಾರು ನಿರ್ಲಕ್ಷ್ಯ ಮಾಡಬಾರದು ಪ್ರತಿಯೊಬ್ಬರು ಮಾಸ್ಕ ಧರಿಸಿಯೇ ಹೊರಗಡೆ ಸಂಚರಿಸಬೇಕು. ಕೊರೊನಾ ವೈರಸ್ ಕುರಿತು ಎಚ್ಚರ ವಹಿಸಬೇಕು ಎಂದು ದೇವರಹಿಪ್ಪರಗಿ ಮತಕ್ಷೇತ್ರದ ಶಾಸಕ ಸೋಮನಗೌಡ ಪಾಟೀಲ ಸಾಸನೂರ ತಿಳಿಸಿದ್ದಾರೆ. ಸರ್ಕಾರ ಸಾರ್ವಜನಿಕರ ಅನುಕೂಲಕ್ಕಾಗಿ ಲಾಕಡೌನ್ ಸಡಿಲಿಕೆ ಮಾಡಿದೆ. ಆದರೆ ಕೊರೊನಾ ಬಗ್ಗೆ ನಾವು ಎಚ್ಚರಿಕೆ ವಹಿಸಲೇಬೇಕು. ಪ್ರತಿಯೊಬ್ಬರು ಮಾಸ್ಕ ಧರಿಸಿಯೇ ಸಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಅಗತ್ಯ ವಿಲ್ಲದಿದ್ದರೆ ಹೊರಗಡೆ ಬರಬಾರದು. ಸರ್ಕಾರ ಒಂದು ವರ್ಷದವರೆಗೆ ಮಾಸ್ಕ ಕಡ್ಡಾಯಗೊಳಿಸಿ ಕಾನೂನು ಮಾಡಿದೆ. […]

Continue Reading

ಅಂತರ ಜಿಲ್ಲಾ ಪ್ರಯಾಣಕ್ಕೆ ಪಾಸ್ ಕಡ್ಡಾಯ : ಕಚೇರಿ ಕೆಲಸಕ್ಕೆ ಹಾಜರಾಗುವಂತೆ ಸರ್ಕಾರಿ ಸಿಬ್ಬಂದಿಗಳಿಗೆ ಸೂಚನೆ

BI ಬಿಜಾಪುರ : ಕೇಂದ್ರ ಗೃಹ ಮಂತ್ರಾಲಯದ ಆದೇಶದನ್ವಯ ಕರ್ನಾಟಕ ರಾಜ್ಯ ಸರ್ಕಾರವು ಹೊಸ ಮಾರ್ಗಸೂಚಿ ಜಾರಿಗೊಳಿಸಿ ಮೇ 4 ರಿಂದ ಅನ್ವಯವಾಗುವಂತೆ ಎರಡು ವಾರಗಳ ಕಾಲ ಲಾಕ್‌ಡೌನ್ ವಿಸ್ತರಿಸಿದ್ದು, ಅದರನ್ವಯ ಈ ಕೆಳಗಿನಂತೆ ಮಾರ್ಗಸೂಚಿಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಆದೇಶ ಹೊರಡಿಸಿದ್ದಾರೆ. ಅದರಂತೆ ಇತರೆ ಜಿಲ್ಲೆಗಳಿಗೆ ಅನುಮತಿಸಲಾದ ಚಟುವಟಿಕೆಗಳಿಗೆ ಅಂತರ ಜಿಲ್ಲೆಗಳ ಸಂಚಾರಕ್ಕಾಗಿ ಪಾಸ್ ಅಗತ್ಯವಿರುತ್ತದೆ. ಇದನ್ನು ಆಯಾ ಇಲಾಖೆಯ ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಶಿಫಾರಸ್ಸು ಮಾಡಬೇಕು. ಅನುಮತಿಸಲಾಗದ […]

Continue Reading

ಮಾಸ್ಕ್ ಧರಿಸದೇ ಓಡಾಡಿದ್ದಲ್ಲಿ – ಸಾಮಾಜಿಕ ಅಂತರ ಪಾಲಿಸದಿದ್ದಲ್ಲಿ ದಂಡ ಸಹಿತ ಶಿಕ್ಷೆ : ಡಿಸಿ ವೈ.ಎಸ್ ಪಾಟೀಲ

BI ಬಿಜಾಪುರ : ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ-2020 ರಡಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ ಓಡಾಡಿದ್ದಲ್ಲಿ ಅಂತಹವರನ್ನು ಶಿಕ್ಷೆಗೆ ಒಳಪಡಿಸುವುದರ ಜೊತೆಗೆ ಸ್ಥಳದಲ್ಲಿಯೇ ದಂಡವನ್ನು ವಿಧಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಈ ವಿಷಯ ತಿಳಿಸಿದ ಅವರು ಮುನ್ನೆಚ್ಚರಿಕೆಗಾಗಿ ಸಾರ್ವಜನಿಕರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಬೇಕು. ಅದರಂತೆ ಸಾಮಾಜಿಕ ಅಂತರವನ್ನೂ ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿರುವ ಅವರು ಕನಿಷ್ಠ ಒಂದು ಮೀಟರ್ ಅಂತರವನ್ನು ಕಾಯ್ದುಕೊಳ್ಳುವಂತೆ ಅವರು ತಿಳಿಸಿದ್ದಾರೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ […]

Continue Reading

ಮಹಾರಾಷ್ಟ್ರ ಹೊರತುಪಡಿಸಿ ಇತರ ಕಡೆಗಳಿಂದ ಬರುವ ಕಾರ್ಮಿಕರ ಬಗ್ಗೆ ತೀವ್ರ ನಿಗಾ ಇಡಲು – ತಪಾಸಣೆಗೆ ಒಳಪಡಿಸಲು ಜಿಲ್ಲಾಧಿಕಾರಿಗಳ ಸೂಚನೆ

BI ಬಿಜಾಪುರ : ಮಹಾರಾಷ್ಟ್ರ ರಾಜ್ಯದ ಕಾರ್ಮಿಕರನ್ನು ಹೊರತುಪಡಿಸಿ ಇತರ ರಾಜ್ಯಗಳಿಂದ ಜಿಲ್ಲೆಗೆ ಬರುವ ಕಾರ್ಮಿಕರನ್ನು ಪ್ರವೇಶಾವಕಾಶ ಇದೇ ಮೇ 04 ರಿಂದ ನೀಡಲಾಗುತ್ತದೆ. ಸೂಕ್ತ ತಪಾಸಣೆ ಮೂಲಕ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲೆಯ ತಾಲೂಕಾ ಮಟ್ಟದ ಅಧಿಕಾರಿಗಳು, ಪೊಲೀಸ್ ಇಲಾಖೆ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು ಗೋವಾ, ರಾಜಸ್ಥಾನ, ಹರಿಯಾಣ ಮತ್ತು ಮಧ್ಯ ಪ್ರದೇಶಗಳಿಂದ ಜಿಲ್ಲೆಗೆ ಮರಳುವ ಕಾರ್ಮಿಕರಿಗೆ ಪ್ರವೇಶಕಾವಕಾಶ ನೀಡುವ ಸಂದರ್ಭದಲ್ಲಿ ನಿಗದಿ ಪಡಿಸಿದ ಸಮಿತಿಯಿಂದ […]

Continue Reading

ಕೋವಿಡ್-19 ಮುನ್ನೆಚ್ಚರಿಕೆಯಾಗಿ ಕಂಟೇನ್ಮೆಂಟ್ ವಲಯ ಹೊರತುಪಡೆಸಿ ಜಿಲ್ಲೆಯಲ್ಲಿ ವಿವಿಧ ಚಟುವಟಿಕೆಗೆ ಅವಕಾಶ : ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ

BI ಬಿಜಾಪುರ : ವಿಜಯಪುರ ನಗರ,ಕಂಟೇನ್ಮೆಂಟ್ ವಲಯಗಳನ್ನು ಹೊರತುಪಡಿಸಿ ಜಿಲ್ಲೆಯಾದ್ಯಂತ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಾರ್ಗಸೂಚಿಯನ್ವಯ ವಿವಿಧ ಚಟುವಟಿಕೆಗಳಿಗೆ ವಿನಾಯತಿಯನ್ನು ಇದೇ ಮೇ 4ರ ನಂತರ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೋಲ್ಲೆಯವರು ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಇಂದು ವಿವಿಧ ಇಲಾಖೆಯ ಅಧಿಕಾರಿ ಮತ್ತು ಜಿಲ್ಲೆಯ ಶಾಸಕರೊಂದಿಗೆ ಕೋವಿಡ್-19 ಮುನ್ನೆಚ್ಚರಿಕಾ ಸಭೆ ನಡೆಸಿದ ಅವರು ಕೇಂದ್ರ […]

Continue Reading

ಅನಾವಶ್ಯಕವಾಗಿ ಓಡಾಡುವ ದ್ವಿಚಕ್ರ /4 ಚಕ್ರ ವಾಹನಗಳ ಸಂಚಾರ ನಿಷೇಧಿಸಿ ಆದೇಶ

BI ಬಿಜಾಪುರ : ಕೊರೋನಾ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಅನಾವಶ್ಯಕವಾಗಿ ದ್ವಿಚಕ್ರ/4 ಚಕ್ರಗಳ ವಾಹನಗಳ ಸಂಚಾರವನ್ನು ನಿಷೇಧಿಸಿ, ಈ ನಿಯಮವನ್ನು ಉಲ್ಲಂಘಿಸುವವರ ವಾಹನವನ್ನು ವಶಪಡಿಸಿಕೊಂಡು (ಸೀಜ್) ತಡೆಹಿಡಿಯುವ ಅಧಿಕಾರವನ್ನು ಲಾಕ್‌ಡೌನ್ ಅವಧಿ ಪೂರ್ಣಗೊಳ್ಳುವವರೆಗೆ ಅಥವಾ ಮುಂದಿನ ಆದೇಶದವರೆಗೆ ಇದರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಆಯಾ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರುಗಳಿಗೆ ಅಧಿಕಾವನ್ನು ಪ್ರತ್ಯಾಯೋಜಿಸಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಆದೇಶ ಹೊರಡಿಸಿದ್ದಾರೆ. ಈ ಆದೇಶವು ತಕ್ಷಣದಿಂದ ಜಾರಿಗೆ ಬಂದಿದ್ದು, ದ್ವಿಚಕ್ರ /4 ಚಕ್ರ ವಾಹನದ […]

Continue Reading