BIJAPUR INFO

ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಪರಿಹಾರ ನೀಡುವಂತೆ ಸಿದ್ದರಾಮಯ್ಯ ಅಗ್ರಹ್

BI NEWS, ಬಿಜಾಪುರ : ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಸರ್ಕಾರದ ವತಿಯಿಂದ ಪರಿಹಾರ ನೀಡುವಂತೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ತಿಳಿಸಿದ್ದಾರೆ. ಸಿದ್ದರಾಮಯ್ಯ ಅವರ ಸ್ವಕ್ಷೇತ್ರ ಬಾದಾಮಿಯ ಹಳದೂರಿನ ಮೂವರು ಸೇರಿದಂತೆ ಆರು ಮಂದಿ ಅಪಘಾತದಲ್ಲಿ ಮೃತರಾಗಿದ್ದು 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದುಕೊಂಡ ಬಳಿಕ ಅಧಿಕಾರಿಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ ಅವರು, ಗಾಯಾಳುಗಳ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಬಾಗಲಕೋಟ ಜಿಲ್ಲಾಧಿಕಾರಿಗಳಿಗೂ ಹೇಳಿದರು. ಮೃತರ ಕುಟುಂಬದವರಿಗೆ ಪರಿಹಾರ, ಗಾಯಾಳುಗಳ ಚಿಕಿತ್ಸೆ ಬಗ್ಗೆ ಗಮನ ಹರಿಸುವಂತೆ ಬಾಗಲಕೋಟ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ್ ಅವರಿಗೆ ಸಿದ್ದರಾಮಯ್ಯ ಅವರು ಸೂಚಿಸಿದರು.

error: Content is protected !!