BIJAPUR INFO

ಕಾ.ನಿ.ಪ ಸಂಘದ ವತಿಯಿಂದ ವಿಜಯಪುರ ಜಿಲ್ಲಾ ಉಪ ವಿಭಾಗಾಧಿಕಾರಿಗೆ ಸನ್ಮಾನ

BI NEWS, ಮುದ್ದೇಬಿಹಾಳ: ತಾಲೂಕಿನಲ್ಲಿ ತಹಸೀಲ್ದಾರ ಅಧಿಕಾರಿಗಳಾಗಿ ಉತ್ತಮ ಮತ್ತು ಪ್ರಾಮಾಣಿಕ ಸೇವೆ ಸಲ್ಲಿಸಿ ಈಗ ವಿಜಯಪುರ ಜಿಲ್ಲಾ ಉಪ ವಿಭಾಗಾಧಿಕಾರಿಯಾಗಿ ಮುಂಬಡ್ತಿ ಪಡೆದು ಪ್ರಥಮ ಬಾರಿಗೆ ಮುದ್ದೇಬಿಹಾಳ ಪಟ್ಟಣಕ್ಕೆ ಆಗಮಿಸಿದ ಕೆಎಸ್ ಅಧಿಕಾರಿ ಸೋಮಲಿಂಗ ಗೆಣ್ಣೂರ ಅವರನ್ನು ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶುಕ್ರವಾರ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿ ಸಂಘದ ಜಿಲ್ಲಾ ಉಪಾಧ್ಯಕ್ಷ ಡಿ.ಬಿ.ವಡವಡಗಿ, ಮುದ್ದೇಬಿಹಾಳ ತಾಲೂಕಿನಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸುವ ಮೂಲಕ ಜನ ಬೆಂಬಲ ಪಡೆದು ಜನಪರ ಅಧಿಕಾರಿಯಾಗಿ ಕೆಲಸ ಮಾಡಿದಂತೆ ಇನ್ನೂ ಮುಂದೆ ಮುದ್ದೇಬಿಹಾಳ ತಾಲೂಕಿನಂತೆ ವಿಜಯಪುರ ಜಿಲ್ಲೆಯ ಜನತೆಗೆ ಇವರ ಪ್ರಮಾಣಿಕ ಸೇವೆ ಸಿಗುವಂತಾಗಿಲಿ ಎಂದು ಹೇಳಿದರು. ಕಾ.ನಿ.ಪ ಮುದ್ದೇಬಿಹಾಳ ತಾಲೂಕು ಘಟಕದ ಉಪಾಧ್ಯಕ್ಷ ಗುರುನಾಥ ಕತ್ತಿ, ಪ್ರಧಾನ ಕಾರ್ಯದರ್ಶಿ ಸಿದ್ದು ಚಲವಾದಿ, ಕಾರ್ಯದರ್ಶಿಗಳಾದ ಲಾಡ್ಲೇಮಶ್ಯಾಕ ನದಾಫ, ಸಾಗರ ಉಕ್ಕಲಿ, ಸದಸ್ಯ ಚೇತನ್ ಕೆಂದೂಳಿ, ತಹಸೀಲ್ದಾರ್ ನಿಂಗಪ್ಪ ಬಿರಾದಾರ, ಉಪ ವಿಭಾಗಾಧಿಕಾರಿ ಕಚೇರಿ ತಹಸೀಲ್ದಾರ್ ಜಿ.ಎಸ್.ಹಿರೇಮಠ, ಸಹಾಯಕ ಕೃಷಿ ನಿರ್ದೇಶಕ ಎಂ.ಎಚ್.ಯರಝರಿ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!