ವೈದ್ಯಕೀಯ ತುರ್ತು ಪ್ರಕರಣಗಳಿಗೆ ಮಾತ್ರ ಪಾಸ್ ವಿತರಣೆ

BIJAPUR NEWS

BI ಬಿಜಾಪುರ : ಕೋವಿಡ್-19 ವೈರಾಣುಗಳಿಂದ ಹರಡುವ ಅಪಾಯಕಾರಿ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಪ್ರೀಲ್ 14ರ ವರೆಗೆ ಸರ್ಕಾರ ದೇಶಾದ್ಯಂತ ಲಾಕ್‌ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಲಭ್ಯವಿಲ್ಲದಂತಹ ತೀವ್ರ ತೆರನಾದ ವೈದ್ಯಕೀಯ ತುರ್ತು ಚಿಕಿತ್ಸೆ ಪಡೆಯುವ ಸಲುವಾಗಿ ಸಂಬಂಧಿಸಿದ ವೈದ್ಯರುಗಳಿಂದ ಪ್ರಮಾಣ ಪತ್ರವನ್ನು ಹಾಜರು ಪಡಿಸಿದ್ದಲ್ಲಿ ಮಾತ್ರ ತಮ್ಮ ಕಚೇರಿಯಿಂದ ಪಾಸ್ ನೀಡಲಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಹೊರತುಪಡಿಸಿ ಇನ್ನಿತರ ಯಾವುದೇ ಪ್ರಕರಣಗಳಲ್ಲಿ ತಮ್ಮ ಕಚೇರಿಯಿಂದ ಪಾಸ್ ನೀಡಲಾಗುವುದಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.